ಕೈಕೊಟ್ಟ ಪ್ರಿಯತಮ – ನೇಣು ಬಿಗಿದುಕೊಂಡು MBBS ವಿದ್ಯಾರ್ಥಿನಿ ಆತ್ಮಹತ್ಯೆ

Public TV
1 Min Read

ಲಕ್ನೋ: 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು (Medical Student) ಹಾಸ್ಟೆಲ್‌ ರೂಮಿನಲ್ಲಿ ಸೀಲಿಂಗ್‌ ಫ್ಯಾನ್‌ಗೆ (Ceiling Fan) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಲ್ಲಿ ನಡೆದಿದೆ.

3ನೇ ವರ್ಷದ MBBS ವಿದ್ಯಾರ್ಥಿನಿ ದಿವ್ಯ ಜ್ಯೋತಿ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಕನೂಜ್‌ ಜಿಲ್ಲೆಯ ನಿವಾಸಿ. ಗಾಜಿಯಾಬಾದ್‌ ಮೋದಿನಗರ ಟೌನ್‌ನ ಸೂರ್ಯ ಕಾಲೊನಿಯಲ್ಲಿ ವಾಸವಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಹೈದರಾಬಾದ್ ಯುವತಿ ಲಂಡನ್‌ನಲ್ಲಿ ಭೀಕರ ಕೊಲೆ

ಜ್ಯೋತಿ ಸ್ನೇಹಿತೆ ದಿವ್ಯಜ್ಯೋತಿಯನ್ನ ಭೇಟಿ ಮಾಡಲು ರೂಮಿನ ಬಳಿ ತೆರಳಿದಾಗ ಬಾಗಿಲು ಮುಚ್ಚಿರುವುದು ಕಂಡುಬಂದಿದೆ. ಎಷ್ಟು ಬಾರಿ ಬಾಗಿಲು ಬಡಿದರೂ ಉತ್ತರವಿಲ್ಲ, ಜ್ಯೋತಿ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದರೂ ಆಕೆ ಉತ್ತರಿಸಲಿಲ್ಲ. ಇದರಿಂದ ಅನುಮಾನಗೊಂಡ ಸ್ನೇಹಿತರು ಕೂಡಲೇ ಮನೆ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ಬಾಗಿಲು ಒಡೆದು ನೋಡಿದಾಗ ಜ್ಯೋತಿ ಸೀಲಿಂಗ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಕಣ್ಣು ಕಿತ್ತು, ಕತ್ತು ಕೊಯ್ದು ನರ್ಸಿಂಗ್‌ ವಿದ್ಯಾರ್ಥಿನಿಯ ಕೊಲೆ – ಕರಾಳ ರಾತ್ರಿಯಲ್ಲಿ ನಡೆದಿದ್ದೇನು?

ಪೊಲೀಸರು ತಪಾಸಣೆ ನಡೆಸಿದಾಗ, ಲವ್‌ ಬ್ರೇಕಪ್‌ ಆಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿರುವ ಡೆತ್‌ ನೋಟ್‌ ಪತ್ತೆಯಾಗಿದೆ. ನಂತರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಡಿಸಿಪಿ ರವಿಕುಮಾರ್‌ ಮಾಹಿತಿ ನೀಡಿದ್ದಾರೆ.

Share This Article