BRICS ಶೃಂಗಸಭೆ: ನೆಲದ ಮೇಲಿದ್ದ ತ್ರಿವರ್ಣ ಧ್ವಜವನ್ನು ಕೈಗೆತ್ತಿಕೊಂಡು ಗೌರವ ತೋರಿದ ಮೋದಿ

Public TV
2 Min Read

ಕೇಪ್‌ಟೌನ್: ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದಕ್ಷಿಣ ಆಫ್ರಿಕಾದ (South Africa) ಜೋಹನ್ಸ್‌ಬಗ್‌ಗೆ (Johannesburg) ತೆರಳಿದ್ದಾರೆ. ಪ್ರವಾಸದಲ್ಲಿರುವ ಮೋದಿಯವರು ಭಾರತದ ತ್ರಿವರ್ಣ ಧ್ವಜಕ್ಕೆ (Tricolor) ಗೌರವ ತೋರಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೋದಿ ಬಗ್ಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.

ಶೃಂಗಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾದ ನಾಯಕರನ್ನು ಗ್ರೂಪ್ ಫ್ರೋಟೋ ಕ್ಲಿಕ್ಕಿಸಿಕೊಳ್ಳಲು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ ನರೇಂದ್ರ ಮೋದಿ ಅವರು ವೇದಿಕೆಯ ನೆಲದ ಮೇಲೆ ತಾವು ನಿಲ್ಲಬೇಕಾಗಿದ್ದ ಸ್ಥಳದಲ್ಲಿ ಪುಟ್ಟ ತ್ರಿವರ್ಣ ಧ್ವಜವನ್ನು ಗಮನಿಸಿದ್ದಾರೆ.

ತಕ್ಷಣ ಮೋದಿ ಧ್ವಜದ ಮೇಲೆ ತಾವು ಕಾಲಿಡದಂತೆ ನೋಡಿಕೊಂಡು, ಪುಟ್ಟ ರಾಷ್ಟ್ರ ಧ್ವಜವನ್ನು ಕೈಗೆತ್ತಿಕೊಂಡು, ತಮ್ಮ ಜೇಬಿನಲ್ಲಿ ಇರಿಸಿಕೊಂಡರು. ಇದನ್ನು ಗಮನಿಸಿದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲೆ ರಾಮಾಫೋಸಾ ಕೂಡಾ ಮೋದಿಯವರನ್ನು ಅನುಸರಿಸಿ, ನೆಲದ ಮೇಲೆ ಇಡಲಾಗಿದ್ದ ದಕ್ಷಿಣ ಆಫ್ರಿಕಾದ ಧ್ವಜವನ್ನು ಎತ್ತಿಕೊಂಡರು. ಇದನ್ನೂ ಓದಿ: ಆ.26ಕ್ಕೆ ಬೆಂಗಳೂರಿಗೆ ಮೋದಿ – ಇಸ್ರೋ ಕೇಂದ್ರ ಕಚೇರಿಗೆ ಭೇಟಿ

ಇದಾದ ಬಳಿಕ ಮೋದಿ ಅವರು ವೇದಿಕೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.

ಇದಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೋದಿ ರಾಷ್ಟ್ರಧ್ವಜಕ್ಕೆ ತೋರಿದ ಗೌರವದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಈಗ ಕರ್ನಾಟಕಕ್ಕೂ ಚಂದ್ರನಿಗೂ ನೇರ ಸಂಪರ್ಕ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್