ಮೈಸೂರು: ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಾರಿ (Lorry) ಚಲಿಸುತ್ತಿದ್ದಾಗಲೇ ಸೇತುವೆ ಕುಸಿದುಬಿದ್ದ ಘಟನೆ ಮೈಸೂರು (Mysuru) ಜಿಲ್ಲೆ ಸರಗೂರು ತಾಲೂಕಿನ ಇಟ್ನಾ ಸಮೀಪದ ಕಬಿನಿ ಬಲದಂಡೆ ನಾಲೆ ಬಳಿ ನಡೆದಿದೆ.
ಪುರದಕಟ್ಟೆ ಮಾರ್ಗವಾಗಿ ನಂಜನಗೂಡಿಗೆ ಭತ್ತ (Paddy) ಹೊತ್ತೊಯ್ಯುತ್ತಿದ್ದ ಲಾರಿ ಸೇತುವೆ ಮೇಲೆ ಸಾಗುತ್ತಿದ್ದಾಗಲೇ ಹಠಾತ್ ಆಗಿ ಸೇತುವೆ ಕುಸಿದಿದೆ. ಇದನ್ನೂ ಓದಿ: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ
ಲಾರಿಯಲ್ಲಿದ್ದ ಲೋಡರ್ಸ್ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಬಿನಿ ಬಲದಂಡೆ ನಿರ್ಮಾಣವಾದಾಗ ಕಟ್ಟಿದ್ದ ಸೇತುವೆ ಇದ್ದಾಗಿದ್ದು ಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದಾಗಿ ಶಿಥಿಲಗೊಂಡಿತ್ತು. ಇದನ್ನೂ ಓದಿ: ಹಾವೇರಿ | ಕಾಡಿನಿಂದ ನಾಡಿಗೆ ಬಂದು ಮನೆಯಲ್ಲಿ ಅವಿತ ಚಿರತೆ
ಲಾರಿಯನ್ನು ಮೇಲೆತ್ತುವುದರ ಜೊತೆಗೆ ಮತ್ತೊಂದು ಲಾರಿ ಮೂಲಕ ಭತ್ತದ ಮೂಟೆಗಳನ್ನ ಕೊಂಡೊಯ್ಯಲು ಸ್ಥಳೀಯರು ನೆರವು ನೀಡಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ- ಸಾಕ್ಷಿದಾರನ ಪರವಾಗಿ ಬರ್ತಾರಾ 6 ಮಂದಿ ಸ್ಥಳೀಯರು?