ಕಲಬುರಗಿಯಲ್ಲಿ ಉತ್ತಮ‌ ಮಳೆ – ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆ

Public TV
1 Min Read

ಕಲಬುರಗಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ (Kalaburagi Rain) ಜಿಲ್ಲೆಯ ಕಮಲಾಪುರ ತಾಲೂಕಿನ ಹಿಪ್ಪರಗಾ ಗ್ರಾಮದ ಸೇತುವೆ ಮುಳುಗಡೆಯಾಗಿದ್ದು, ಕುದಮೂಡ ಹಾಗೂ ಕಲಕುಟಗಾ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಮಳೆಯಿಂದಾಗಿ ಸೇತುವೆ ಮುಳುಗಡೆ (Bridge Submerged) ಹಿನ್ನೆಲೆಯಲ್ಲಿ ವಾಹನ ಸವಾರರ ಪರದಾಟ ನಡೆದಿದ್ದು, ಗ್ರಾಮೀಣ ಭಾಗದಲ್ಲಿ ಸುರಿದ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮಹಾರಾಷ್ಟ್ರದಿಂದ ಭೀಮೆಗೆ ನೀರು
ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಭೀಮಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಭೀಮೆಗೆ ನೀರು ಬಿಡುಗಡೆ ಮಾಡಲಾಗಿದೆ. ತುಂಬಿ ಹರಿಯುತ್ತಿರುವ ಹಿನ್ನೆಲೆ, ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗಾ ಸೇತುವೆ ಮುಳುಗಡೆ ಹಂತಕ್ಕೆ ಬಂದು ತಲುಪಿದೆ.

ಇನ್ನೂ ಮಹಾರಾಷ್ಟ್ರದಿಂದ ಅಪಾರ ಪ್ರಮಾಣದಲ್ಲಿ ಭೀಮೆಗೆ ನೀರು ಹರಿಬಿಟ್ಟ ಪರಿಣಾಮವಾಗಿ ಭೀಮಾ ನದಿಯ ತಟದ ಜನರಲ್ಲಿ ಪ್ರವಾಹದ ಆತಂಕ ಮನೆಮಾಡಿದೆ.

Share This Article