ರಾಮನಗರ | ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

Public TV
1 Min Read

ರಾಮನಗರ: ಹಳೆಯ ದ್ವೇಷದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ (Congress) ಮುಖಂಡನೋರ್ವನ ಬರ್ಬರ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕನಕಪುರ (Kanakapura) ತಾಲೂಕಿನ ಸಾತನೂರು (Sathanur) ಗ್ರಾಮದ ಡಾಬಾವೊಂದರ ಬಳಿ ನಡೆದಿದೆ.

ಹೊಂಗಾಣಿದೊಡ್ಡಿ ಗ್ರಾಮದ ನಂಜೇಶ್ (45) ಮೃತ ಕಾಂಗ್ರೆಸ್ ಮುಖಂಡ. ಕನಕಪುರ ತಾಲೂಕಿನ ಅಚ್ಚಲು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾಗಿದ್ದರು.ಇದನ್ನೂ ಓದಿ: ಮಾದಕ ವಸ್ತು ತಯಾರಿಕೆಗೆ ಸೇಫ್‌ ಜೋನ್‌ ಆಗ್ತಿದಿಯಾ ಮೈಸೂರು?

ಮೃತ ನಂಜೇಶ್ ನಾಲ್ಕು ದಿನಗಳ ಹಿಂದೆ ಸಾತನೂರು ಗ್ರಾಮದಲ್ಲಿ ಸೈಟ್ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದರು. ಈ ಹಿನ್ನೆಲೆ ಶ್ರೀನಿವಾಸ್ ಎಂಬಾತ ವೈಯಕ್ತಿಕ ವೈಷಮ್ಯದಿಂದ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಕೂಡಲೇ ಗಾಯಳುವನ್ನು ಕನಕಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಜು.27) ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬAಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸಿದ ಸರ್ಕಾರ; ಅಧಿಕಾರಿಗಳ ಯಡವಟ್ಟಿಗೆ ಕುಟುಂಬ ಕಂಗಾಲು

Share This Article