ರಾಜಕೀಯ ಯುದ್ಧ ಕಾಲದಲ್ಲಿ ಮಾಜಿ ಸಿಎಂ ಸೈಲೆಂಟ್-ಪ್ರಚಾರಕ್ಕೂ ಹೋಗದೇ ಮನೆಯಲ್ಲಿ ಕುಳಿತ ಬಿಎಸ್‍ವೈ

Public TV
1 Min Read

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಚಾರಕ್ಕೂ ತೆರಳದೇ ಶಿಕಾರಿಪುರದ ಮನೆಯಲ್ಲಿ ಕುಳಿತಕೊಂಡಿರುವುದು ಪಕ್ಷದ ಆಂತರಿಕ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಪುತ್ರ ವಿಜಯೇಂದ್ರ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ತಪ್ಪಿದ್ದರಿಂದ ಅಸಮಾಧಾನಗೊಂಡ ಯಡಿಯೂರಪ್ಪ ಮನೆಯಲ್ಲಿದ್ದಾರೆ ಅಂತಾ ಹೇಳಲಾಗುತ್ತಿದೆ.

ಪುತ್ರ ವಿಜಯೇಂದ್ರ ಟಿಕೆಟ್ ತಪ್ಪಿಸಲು ಕಾರಣ ಅಂತಾ ಹೇಳಲಾಗುತ್ತಿರುವ ಕೇಂದ್ರ ಸಚಿವ ಅನಂತಕುಮಾರ್ ಮತ್ತು ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ ವಿರುದ್ಧ ಆಪ್ತರ ಜೊತೆ ಬಿಎಸ್‍ವೈ ಆಕ್ರೋಶ ಹೊರ ಹಾಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ವಿಜಯೇಂದ್ರಗೆ ಟಿಕೆಟ್ ತಪ್ಪಿದ ಎಫೆಕ್ಟ್-ನೋಟಾ ಚಲಾವಣೆ ಅಭಿಯಾನದ ಕರಪತ್ರ ಫುಲ್ ವೈರಲ್

ಈಗಾಗಲೇ ಯಡಿಯೂರಪ್ಪ 224 ಕ್ಷೇತ್ರದಲ್ಲಿ ಪರಿವರ್ತನಾ ಯಾತ್ರೆ ಮಾಡಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದು, ಕೇವಲ ಆಪ್ತರ 100 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲು ಪ್ಲಾನ್ ರೂಪಿಸಿದ್ದಾರೆ ಎಂದುಪಬ್ಲಿಕ್ ಟಿವಿ ಮೂಲಗಳು ತಿಳಿಸಿವೆ. ಇದನ್ನೂ ಓದಿ:  ವರಿಷ್ಟರು ಮುಂಚೆಯೇ ತಿಳಿಸಿದ್ದರೆ, ವಿಜಯೇಂದ್ರ ವರುಣಾಕ್ಕೆ ತೆರಳುತ್ತಿರಲಿಲ್ಲ-ಬಿಜೆಪಿ ಹೈಕಮಾಂಡ್ ವಿರುದ್ಧ ಈಶ್ವರಪ್ಪ ಗರಂ!

ಹಾಸನ, ಅರಕಲಗೂಡು, ತುಮಕೂರು, ನೆಲಮಂಗಲದಲ್ಲಿ ಪ್ರಚಾರ ಪ್ರವಾಸದ ವೇಳಾಪಟ್ಟಿ ಈಗಾಗಲೇ ಸಿದ್ಧಗೊಂಡಿದೆ. ವೇಳಾಪಟ್ಟಿಯಂತೆ ಯಡಿಯೂರಪ್ಪ ಪ್ರಚಾರದಲ್ಲಿ ಭಾಗಿಯಾಗ್ತಾರಾ ಎಂಬುವುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ನಿಮ್ಮ ಮಗನಿಗಿಂತ ನಮಗೆ ಪಕ್ಷವೇ ಮುಖ್ಯ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ಬಿಎಸ್‍ವೈಗೆ ಅಮಿತ್ ಶಾ ಸೂಚನೆ

Share This Article
Leave a Comment

Leave a Reply

Your email address will not be published. Required fields are marked *