ಕಮಲ- ದಳ ದೋಸ್ತಿ ಕುದುರ್ತಿರೋ ಬೆನ್ನಲ್ಲೇ ಬಿಎಸ್‌ವೈ ದೆಹಲಿಗೆ

Public TV
1 Min Read

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Loksabha Election) ಬಿಜೆಪಿ-ಜೆಡಿಎಸ್ (BJP- JDS) ನಡುವೆ ದೋಸ್ತಿ ಕುದುರ್ತಿರೋ ಹೊತ್ತಲ್ಲಿಯೇ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ದೆಹಲಿಗೆ ಹೊರಟುನಿಂತಿದ್ದಾರೆ.

ಬುಧವಾರ ವರಿಷ್ಠರನ್ನು ಭೇಟಿ ಮಾಡಲಿರುವ ಮಾಜಿ ಸಿಎಂ, ಮೈತ್ರಿ ಸೇರಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಎಷ್ಟು ಕ್ಷೇತ್ರಗಳನ್ನು ಉಳಿಸಿಕೊಂಡ್ರೆ ಉತ್ತಮ, ಎಷ್ಟು ಸೀಟ್‌ಗಳನ್ನು ಪಡೆಯಬೇಕು..? ಎಲ್ಲೆಲ್ಲಿ ಪಕ್ಷದ ಸ್ಥಿತಿಗತಿ ಹೇಗಿದೆ ಎಂಬೆಲ್ಲಾ ವಿಚಾರಗಳ ಬಗ್ಗೆ ಯಡಿಯೂರಪ್ಪ ವರದಿ ಸಲ್ಲಿಸಲಿದ್ದಾರೆ. ಇದನ್ನೂ ಓದಿ: 10 ದಿನಗಳೊಳಗೆ ಉತ್ತರ ಕೊಡುವಂತೆ ಬಿ.ಕೆ ಹರಿಪ್ರಸಾದ್‌ಗೆ ನೋಟಿಸ್

ಇತ್ತ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿಯೂ ದೋಸ್ತಿ ರಾಜಕಾರಣದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆದಿದೆ. ಲೋಕಸಭೆ ಚುನಾವಣೆ ತಯಾರಿ, ಪಕ್ಷ ಸಂಘಟನೆ, ರಾಜ್ಯ ಪ್ರವಾಸ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸುವುದು.. ಪರಿಷತ್ ಚುನಾವಣೆ.. ಹೀಗೆ ಹಲವು ವಿಚಾರಗಳ ಬಗ್ಗೆ ಬಿಜೆಪಿ ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದೆ.

ಸಭೆಯಲ್ಲಿ ಕೆಲವರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ನಾಳೆಯೂ ಸಭೆ ನಡೆಯಲಿದೆ. ಅಸಹಾಯಕರು ಮೈತ್ರಿ ಮಾಡ್ಕೊಳ್ತಿದ್ದಾರೆ ಎಂಬ ಶೆಟ್ಟರ್ ಹೇಳಿಕೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಮಾತಾಡ್ತಾ, ದೆಹಲಿಗೆ ಹೋಗೋಕೆ ಇನ್ನೂ ಟೈಂ ಇದೆ ಅಂದ್ರು. ರೇವಣ್ಣ ಅವ್ರಂತೂ, ನಾವು ಬಿಜೆಪಿ ಜೊತೆ ಹೋದ್ರೆ ಇವ್ರಿಗೇನು ತೊಂದ್ರೆ ಅಂತಾ ಗರಂ ಆದ್ರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್