ಮುಡಾ ಕೇಸ್‌ ಚುರುಕು ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಹೈಕೋರ್ಟ್‌ಗೆ ಸಿಐಡಿ ಅರ್ಜಿ

Public TV
1 Min Read

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೋ (POSCO Case) ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಸಿಎಂ ವಿರುದ್ಧ ಬಿಜೆಪಿಯಿಂದ (BJP) ರಾಜೀನಾಮೆ ಒತ್ತಾಯ, ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಬೆನ್ನಲ್ಲೇ ಬಿಎಸ್‌ವೈ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಸರ್ಕಾರ ತೀವ್ರಗೊಳಿಸಿದೆ.

ಮಧ್ಯಂತರ ರಕ್ಷಣೆ ತೆರವು ಮಾಡಲು ಹೈಕೋರ್ಟ್‌ಗೆ (High Court) ಸಿಐಡಿ ಮೆಮೋ ಸಲ್ಲಿಕೆ ಮಾಡಿದೆ. ಸಿಐಡಿ ಪರ ಎಸ್‌ಪಿಪಿ ಅಶೋಕ್ ನಾಯ್ಕ್ ಅವರು ಮೆಮೋ ಸಲ್ಲಿಕೆ ಮಾಡಿದ್ದಾರೆ. ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಧ್ಯಾಹ್ನ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಇದನ್ನೂ ಓದಿ: ಪೋಕ್ಸೊ ಕೇಸಲ್ಲಿ ಬಿಎಸ್‌ವೈಗೆ ರಿಲೀಫ್‌; ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚನೆ

ಬಿಎಸ್‌ವೈ ಬಂಧನಕ್ಕೆ ಹೈಕೋರ್ಟ್ (High Court) ನೀಡಿದ ತಡೆಯಾಜ್ಞೆ ತೆರವಿಗೆ ಸರ್ಕಾರ ಈಗ ಕಸರತ್ತು ಆರಂಭಿಸಿದೆ. ತಡೆಯಾಜ್ಞೆ ತೆರವುಗೊಳಿಸಿ ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ಲ್ಯಾನ್‌ ಮಾಡಿದೆ.

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಬಿಎಸ್‌ವೈ ಬಂಧನಕ್ಕೆ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಕಾನೂನು ಹೋರಾಟ ನಡೆಸುವ ಸಾಧ್ಯತೆಯಿದೆ ಎಂದು ಪಬ್ಲಿಕ್‌ ಟಿವಿ ಈ ಹಿಂದೆ ವರದಿ ಮಾಡಿತ್ತು.

 

Share This Article