ಮಂಡ್ಯ: ಮಹಾರಾಷ್ಟ್ರದ (Maharashtra) ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ (Mandya) ಮೂಲದ ಬಿಎಸ್‌ಎಫ್ ಯೋಧ (BSF Soldier) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44) ಮೃತ ಯೋಧ. ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಯೋಧ ಮೃತಪಟ್ಟಿದ್ದಾರೆ. ಮಾದೇಗೌಡ 2000ರಲ್ಲಿ ಮೈಸೂರಿನಲ್ಲಿ ನಡೆದ ಬಿಎಸ್‌ಎಫ್ ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿದ್ದು, ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಅಗರ ಮೆಟ್ರೋ ಕಾಮಗಾರಿ ವೇಳೆ ಅವಘಡ – ಆಯತಪ್ಪಿ ಬಿದ್ದ ಬೃಹತ್ ಕ್ರೇನ್
ಇಂದು ಯೋಧನ ಮೃತದೇಹ ಮಂಡ್ಯಕ್ಕೆ ಆಗಮಿಸಿದ್ದು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಶಾಸಕ ಗಣಿಗ ರವಿಕುಮಾರ್, ಡಿಸಿ ಡಾ.ಕುಮಾರ, ಎಸ್ಪಿ ಶೋಭಾರಾಣಿ ಗೌರವ ನಮನ ಸಲ್ಲಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಇಂದು ಮಧ್ಯಾಹ್ನದ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

