ಗ್ರಾಮೀಣ, ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕ: ಬಿಎಸ್‌ವೈ ಮೆಚ್ಚುಗೆ

Public TV
1 Min Read

ಬೆಂಗಳೂರು: ಭಾರತ ಸರ್ಕಾರದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ 2022-23 ಸಾಲಿನ ಆಯವ್ಯಯವು ಕೋವಿಡ್-19 ರಿಂದ ಉಂಟಾದ ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದ್ದು, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ವಿಶ್ಲೇಷಿಸಿದ್ದಾರೆ.  ಇದನ್ನೂ ಓದಿ: Budget 2022: ವರ್ಲ್ಡ್‌ ಕ್ಲಾಸ್‌ ಶಿಕ್ಷಣಕ್ಕೆ ಡಿಜಿಟಲ್‌ ವಿಶ್ವವಿದ್ಯಾಲಯ ಸ್ಥಾಪನೆ

ಪ್ರತಿ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಒದಗಿಸುವುದು, ನಗರ ಪ್ರದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ಉದ್ದೇಶಿಸಿರುವುದು ಸ್ವಾಗತರ್ಹ ವಿಷಯ ಎಂದಿದ್ದಾರೆ. ಇದನ್ನೂ ಓದಿ: Budget: 2022-23ರ ಹೊತ್ತಿಗೆ 5G ಮೊಬೈಲ್‌ ಸೇವೆ

ದೇಶದ ಪ್ರಮುಖ ನದಿಗಳ ಜೋಡಣೆ, ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವುದು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಒತ್ತು ನೀಡಿ, 2023 ರ ವರ್ಷವನ್ನು “ಅಂತರಾಷ್ಟ್ರೀಯ ಸಿರಿಧಾನ್ಯ” ವರ್ಷವೆಂದು ಘೋಷಣೆ ಮಾಡಿದ್ದು ಒಟ್ಟಾರೆಯಾಗಿ ಜನಪರವಾದ ಆಯವ್ಯಯ ಮಂಡಿಸಿರುವ ವಿತ್ತ ಸಚಿವರನ್ನು ಹಾಗೂ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

&

Share This Article
Leave a Comment

Leave a Reply

Your email address will not be published. Required fields are marked *