ಪದ್ಮಭೂಷಣ ಪ್ರಶಸ್ತಿ ಬೇಡ: ಬುದ್ಧದೇವ್ ಭಟ್ಟಾಚಾರ್ಜಿ

Public TV
2 Min Read

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಜಿ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವನ್ನು ನೀಡುವುದಾಗಿ ಅಧಿಕೃತ ಘೋಷಣೆಯಾದ ಕೆಲವೇ ನಿಮಿಷಗಳಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. ಯಾರೂ ನನಗೆ ಈ ಬಗ್ಗೆ ಏನನ್ನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಅಂತ ಬುದ್ಧದೇವ್ ಭಟ್ಟಾಚಾರ್ಜಿ ಹೇಳಿದ್ದಾರೆ. ಸಿಪಿಐ(ಎಮ್) ಮತ್ತು ಅವರ ಹೇಳಿಕೆಯಲ್ಲಿ, ರಾಜ್ಯದಿಂದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ನಮ್ಮ ಪಕ್ಷದ ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಪ್ರಶಸ್ತಿಗಾಗಿ ಅಲ್ಲ ಜನರಿಗಾಗಿ ಎಂದರು. ಇದನ್ನೂ ಓದಿ: ದೈಹಿಕ ಅನ್ಯೋನ್ಯತೆ ಸಂಬಂಧದ ಪ್ರಮುಖ ಭಾಗವಲ್ಲ: ದೀಪಿಕಾ ಪಡುಕೋಣೆ

ಮತ್ತೊಂದೆಡೆ ಹಿರಿಯ ಬಿಜೆಪಿ ನಾಯಕ ಮತ್ತು ಸಂಸದ ರವಿಶಂಕರ್ ಪ್ರಸಾದ್ ಅವರು ಟ್ವಿಟ್ಟರ್‌ ನಲ್ಲಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್‍ರವರು, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಅವರಿಗೆ ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಮೌನಿರಾಯ್ ಬ್ಯಾಚುಲರ್ ಪಾರ್ಟಿ

ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಸಿಪಿಎಂ ನಾಯಕ ಭಟ್ಟಾಚಾರ್ಯ ಜಿ ಅವರಿಗೆ ಪದ್ಮಭೂಷಣ ನೀಡುವುದು ಸಾರ್ವಜನಿಕರ ಜೀವನದಲ್ಲಿ ಅವರ ಕೊಡುಗೆಗಳನ್ನು ಗುರುತಿಸಿದೆ ಎಂದರು.

ಇದು ಪ್ರಧಾನಿ ನರೇಂದ್ರ ಮೋದಿಯವರ ಉದಾರತೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ಅವರ ಬದ್ಧತೆಯನ್ನು ತೋರಿಸುತ್ತದೆ ಎಂದು ಪ್ರಸಾದ್ ಟ್ವೀಟ್ ಮಾಡಿದ್ದಾರೆ. ಸಿಪಿಐ(ಎಮ್) ನಾಯಕ, ಬುದ್ಧದೇವ್ ಭಟ್ಟಾಚಾರ್ಜಿ ಅವರು 2000 ರಿಂದ 2011 ರವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು.

ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ:
ಪದ್ಮ ವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *