ಕಟ್ಟಡ ಕುಸಿತ- ಹಲವರು ನಾಪತ್ತೆ

Public TV
2 Min Read

ನವದೆಹಲಿ: 4 ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮಕ್ಕಳ ಶವ ಪತ್ತೆ ಯಾಗಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನವದೆಹಲಿಯ ಸಬ್ಜಿ ಮಂಡಿ ಏರಿಯಾದಲ್ಲಿ ನಡೆದಿದೆ.

ಕಟ್ಟಡ ಕುಸಿದ ಪರಿಣಾಮ ಮಕ್ಕಳು ಸೇರಿದಂತೆ ಹಲವು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದರು. ಅವರಲ್ಲಿ ಇಬ್ಬರು ಮಕ್ಕಳ ಶವಗಳನ್ನು ಹೊರಗೆ ತೆಗೆಯಲಾಗಿದೆ. 7 ಅಗ್ನಿಶಾಮಕದಳದ ವಾಹನಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ ವೃದ್ಧರೊಬ್ಬರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ

ಇಂದು ಬೆಳಗ್ಗೆ 11.50ಕ್ಕೆ ದೆಹಲಿಯ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಕಟ್ಟಡದಲ್ಲಿ ಕಾಮಗಾರಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ. ಹೀಗಾಗಿ, ಕಟ್ಟಡದೊಳಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರು ಅವಶೇಷಗಳಡಿ ಸಿಲುಕಿದ್ದಾರೆ. ಕಟ್ಟಡದ ಕೆಳಗೆ ನಿಲ್ಲಿಸಿದ್ದ ಕಾರು ಕೂಡ ಕಟ್ಟಡದ ಅಡಿಯಲ್ಲಿ ಸಿಲುಕಿದೆ. ಇದನ್ನೂ ಓದಿ: ಆಸ್ಕರ್ ಫರ್ನಾಂಡಿಸ್ ನಡೆದು ಬಂದ ಹಾದಿ

ಸಬ್ಜಿ ಮಂಡಿ ಪ್ರದೇಶದಲ್ಲಿ ಕಟ್ಟಡ ಕುಸಿದಿರುವ ಘಟನೆ ಬಹಳ ಬೇಸರದ ಸಂಗತಿ. ರಕ್ಷಣಾ ಕಾರ್ಯಾಚರಣೆಗೆ ದೆಹಲಿ ಆಡಳಿತಾಧಿಕಾರಿಗಳು ಬಹಳ ಪ್ರಯತ್ನಿಸುತ್ತಿದ್ದಾರೆ. ನಾನೇ ಖುದ್ದಾಗಿ ಪರಿಸ್ಥಿತಿಯ ಬಗ್ಗೆ ಗಮನ ಹರಿಸುತ್ತಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದನ್ನೂ ಓದಿ: ಕಚ್ಛಾ ತೈಲ ಬೆಲೆ ಏರಿಕೆ ನೆಪ ಹೇಳಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಸಿದ್ದರಾಮಯ್ಯ

ಪ್ರತ್ಯಕ್ಷದರ್ಶಿಯ ಪ್ರಕಾರ, ಇದ್ದಕ್ಕಿದ್ದಂತೆ ಕಟ್ಟಡ ಶೇಕ್ ಆಗಿದ್ದು, ಆಗ ಕರೆಂಟ್ ಕೂಡ ಹೋಯಿತು. ನಂತರ ಕಟ್ಟಡ ನೆಲಸಮವಾಯಿತು. ಕಟ್ಟಡದ ಬಳಿ ಹೋಗುತ್ತಿದ್ದ ಮಕ್ಕಳ ಮೇಲೆ ಕೂಡ ಕಟ್ಟಡದ ಭಾಗಗಳು ಸಿಲುಕಿವೆ. ಕಾಮಗಾರಿ ವೇಳೆ ಕಟ್ಟಡದಲ್ಲಿದ್ದವರು ಈ ವೇಳೆ ಹೊರಬರಲಾರದೆ ಒಳಗೆ ಸಿಲುಕಿದ್ದಾರೆ. ಅವರ ಮೇಲೆ ಕಟ್ಟಡದ ಭಾಗಗಳು ಬಿದ್ದಿವೆ ಎನ್ನಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *