ಆಟೋ ಬಚಾವ್ ಮಾಡಲು ಹೋಗಿ 35 ಮಂದಿಯಿದ್ದ ಬಸ್ ಡಿವೈಡರ್ ಗೆ ಡಿಕ್ಕಿ

Public TV
1 Min Read

ಬೆಂಗಳೂರು: ಆಟೋವನ್ನು ಬಚಾವ್ ಮಾಡಲು ಹೋಗಿ ಬಸ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, 35 ಮಂದಿ ಪ್ರಯಾಣಿಕರು ಪಾರಾಗಿರುವ ಘಟನೆ ನೆಲಮಂಗಲ ಪಟ್ಟಣದಲ್ಲಿ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಬಿನ್ನಮಂಗಲ ಬಳಿ ಈ ದುರ್ಘಟನೆ ನಡೆದಿದ್ದು, 35 ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಭಾರಿ ಅನಾಹುತದಿಂದ ಪಾರಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗೋವಾದಿಂದ ಬೆಂಗಳೂರಿಗೆ ಬಸ್ ಬರುತ್ತಿತ್ತು. ಈ ವೇಳೆ ಬಸ್ ಆಟೋವನ್ನು ಬಚಾವ್ ಮಾಡುವ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಸದ್ಯಕ್ಕೆ ಈ ಅವಘಡದಿಂದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ನವಯುಗ ಟೋಲ್ ಸಿಬ್ಬಂದಿ ಬಸ್ ತೆರವು ಮಾಡವ ಕಾರ್ಯದಲ್ಲಿ ನಿರತರಾಗಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *