-8 ಮಂದಿಗೆ ಗಾಯ, ಇಬ್ಬರು ಗಂಭೀರ
ಬೆಂಗಳೂರು: ಗೂಡ್ಸ್ ಲಾರಿಯೊಂದು ಏಕಾಏಕಿ ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದಿದ್ದು, ಬಸ್ಸಿನಲ್ಲಿದ್ದ ಎಂಟು ಮಂದಿ ಗಂಭೀರ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಎಪಿಎಸ್ ಸರ್ಕಲ್‍ನಲ್ಲಿ ಅಪಘಾತ ನಡೆದಿದೆ. ಎಪಿಎಸ್ ಸರ್ಕಲ್ ಬಳಿ ಬರುತ್ತಿದ್ದ ಬಸ್ಸಿಗೆ ಏಕಾಏಕಿ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಹೋಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬಸ್ಸಿನಲ್ಲಿದ್ದ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಚಾಲಕ ಸೇರಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಲಾರಿ ಚಾಲಕನ ಅತಿ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಜಿಗಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.