ನಿಂತಿದ್ದ ಲಾರಿಗೆ ಬಸ್ ಡಿಕ್ಕಿ – ಇಬ್ಬರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
1 Min Read

– 32 ಪ್ರಯಾಣಿಕರಿಗೆ ಗಾಯ

ರಾಯಚೂರು: ಜಿಲ್ಲೆಯ ಸಿಂಧನೂರಿನ (Sindhanur) ಮಲ್ಲದಗುಡ್ಡ ಗ್ರಾಮದ ಬಳಿ ಶನಿವಾರ ರಾತ್ರಿ ನಡೆದಿದ್ದ ಅಪಘಾತದಲ್ಲಿ (Accident) ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಇಂದು ಸಾವನ್ನಪ್ಪಿದ್ದಾರೆ.

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ (Lorry) ಸಾರಿಗೆ ಬಸ್ (Bus) ಡಿಕ್ಕಿ ಹೊಡೆದ ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸುದೀಪ್ (18) ಹಾಗೂ ರಾಮಪ್ಪ (60) ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯಿಂದ ನಿರ್ವಾಹಕ ಸೇರಿ 5 ಜನರ ಸ್ಥಿತಿ ಗಂಭೀರವಾಗಿದೆ. ಬಸ್‌ನಲ್ಲಿದ್ದ 32 ಜನರಿಗೆ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್‌ಗೆ ರವಾನಿಸಲಾಗಿದೆ. ಸಣ್ಣಪುಟ್ಟ ಗಾಯಗಳಾದ ಪ್ರಯಾಣಿಕರನ್ನು ರಾಯಚೂರಿನ ರಿಮ್ಸ್, ಸಿಂಧನೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಂಗಳವಾರ ಬೆಂಗಳೂರು ಬಂದ್ ಇರುತ್ತಾ? – ಕನ್ನಡ ಸಂಘಟನೆಗಳಿಂದ ತಟಸ್ಥ ಧೋರಣೆ

ಸಿಂಧನೂರಿನಿಂದ ಅಂಕಲಿಮಠದ ಕಡೆಗೆ ವೇಗವಾಗಿ ಹೊರಟಿದ್ದ ಬಸ್ ಎದುರಿಗೆ ಬಂದ ಬೈಕ್‌ಗೆ ದಾರಿ ಬಿಡಲು ಹೋಗಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು. ಇಂಡಿಕೇಟರ್ ಹಾಕದೆ ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿದ್ದು, ಅಪಘಾತಕ್ಕೆ ಕಾರಣವಾಗಿದೆ. ಸಿಂಧನೂರಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕ ಅಮರೇಶ್, ಲಾರಿ ಚಾಲಕ ನಾಗೇಶ್ವರರಾವ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾವೇರಿ, ಹೇಮಾವತಿ ನೀರಿಗಾಗಿ ಮಂಗಳವಾರ ಕೆಆರ್ ಪೇಟೆ ಬಂದ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್