ಉಡುಪಿ: ಕಾರ್ಕಳದ (Karkala) ಮೀಯಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ತೂಫಾನ್ (Toofan) ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ (Accident) ಮೂವರು ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಸ್ ಹಾಗೂ ತೂಫಾನ್ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ತೂಫಾನ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜುಗಿವೆ. ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಅಪಾರ್ಟ್‌ಮೆಂಟ್ ಆವರಣದಲ್ಲಿ ಸೈಕಲ್ ಆಟವಾಡುತ್ತಿದ್ದಾಗ ಕಾರು ಡಿಕ್ಕಿ – ಬಾಲಕ ದುರ್ಮರಣ
ಗಾಯಗೊಂಡವರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಕಾರ್ಕಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದಾವಣಗೆರೆ | ಸ್ನೇಹಿತೆಯೊಂದಿಗಿದ್ದ ಯುವಕನ ವಿಡಿಯೋ ಮಾಡಿ ಸುಲಿಗೆ – ಇಬ್ಬರು ಅರೆಸ್ಟ್

