ಚನ್ನರಾಯಪಟ್ಟಣ | ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ – ಹೆಡ್‌ಕಾನ್ಸ್‌ಟೇಬಲ್‌ ಸಾವು

1 Min Read

ಹಾಸನ: ಬೈಕ್‌ ಹಾಗೂ ಸಾರಿಗೆ ಬಸ್ ನಡುವೆ ನಡೆದ ಅಪಘಾತದಲ್ಲಿ (Accident) ಹೆಡ್‌ಕಾನ್ಸ್‌ಟೇಬಲ್‌ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣದಲ್ಲಿ (Channarayapatna) ನಡೆದಿದೆ.

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿದ್ದ ಬೀರಲಿಂಗ (41) ಮೃತಪಟ್ಟ ಮುಖ್ಯಪೇದೆ. ಮಧ್ಯಾಹ್ನ ಪೊಲೀಸ್ ಕ್ವಾಟರ್ಸ್‌ನಲ್ಲಿರುವ ಮನೆಗೆ ಊಟಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸಾರಿಗೆ ಬಸ್‌ ಬೈಕ್‌ಗೆ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬೀರಲಿಂಗ ಅವರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮಕ್ಕಳಾದ ಮೇಲೆ ಮೊದಲ ಪತಿಗೆ ಕೈಕೊಟ್ಟು 2ನೇ ಮದುವೆ, 24 ಲಕ್ಷ ದೋಚಿ ಮತ್ತೊಬ್ಬನ ಜೊತೆ ಜೂಟ್‌!

ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಠಾಣೆ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 65 ಎಕರೆ ಅರಣ್ಯ ಭೂಮಿಯಲ್ಲಿ ಬೆಳೆದಿದ್ದ 1.80 ಲಕ್ಷ ಗಾಂಜಾ ಗಿಡಗಳನ್ನು ನಾಶಪಡಿಸಿದ ಭದ್ರತಾ ಪಡೆ

Share This Article