ನೈಸ್‌ರೋಡ್ ಬಳಿ ಲಾರಿಗೆ ಬಸ್ ಡಿಕ್ಕಿಯಾಗಿ ಸರಣಿ ಅಪಘಾತ – ಓರ್ವ ಸಾವು, ನಾಲ್ವರು ಗಂಭೀರ

Public TV
1 Min Read

ಬೆಂಗಳೂರು: ನಿಂತಿದ್ದ ಲಾರಿಗೆ (Lorry) ಹಿಂಬದಿಯಿಂದ ಮಿನಿ ಬಸ್ (Mini Bus) ಡಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನೈಸ್‌ರೋಡ್ (Nice Road) ಬಳಿ ನಡೆದಿದೆ.

ಬೆಳಗ್ಗೆ 9 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ (Electronic City) ಟೋಲ್ ಬಳಿ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದೆ ಬರುತ್ತಿದ್ದ ಎರಡು ಕಾರುಗಳು ಕೂಡ ಡಿಕ್ಕಿಯಾಗಿ ಸರಣಿ ಅಪಘಾತ ಉಂಟಾಗಿದೆ. ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ | ಸಿಬಿಐ ಪ್ರಕರಣ ರದ್ದಿಲ್ಲ – ಸುಪ್ರೀಂನಲ್ಲಿ ಡಿಕೆಶಿ ಅರ್ಜಿ ವಜಾ

ಘಟನೆಯಲ್ಲಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಇದನ್ನೂ ಓದಿ: ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ : ರಾಮಲಿಂಗಾ ರೆಡ್ಡಿ

Share This Article