ಮುಂಬೈ: ಪುಣೆ ನಗರದಲ್ಲಿ ಮಂಗಳವಾರ ರಾಜ್ಯ ಸಾರಿಗೆ ಬಸ್ (Bus) ಧಗಧಗನೇ ಹೊತ್ತಿ ಉರಿದಿದೆ.
ಯರವಾಡ ಏರಿಯಾದ ಶಾಸ್ತ್ರಿ ಚೌಕ್‍ನಲ್ಲಿ ಬೆಳಗ್ಗೆ 11:30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಿಂದ ಅದೃಷ್ಟವಶಾತ್ 42 ಪ್ರಯಾಣಿಕರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ- ಇಬ್ಬರ ದುರ್ಮರಣ
Fire in Bus.#Pune pic.twitter.com/JgGjjbaQvv
— Vivek Gupta (@imvivekgupta) November 1, 2022
ಬಸ್ ಯಾವತ್ಮಲ್ ನಿಂದ ಪುಣೆ (Pune) ಕಡೆಗೆ ಸಂಚರಿಸುತ್ತಿತ್ತು. ಈ ವೇಳೆ ಬಸ್ಸಿನ ಇಂಜಿನ್ ಭಾಗದಲ್ಲಿ ಹೊಗೆ ಬರುವುದನ್ನು ಚಾಲಕ ಹಾಗೂ ನಿರ್ವಾಹಕರು ಗಮನಿಸಿದ್ದಾರೆ. ಕೂಡಲೇ ಅವರು ಪ್ರಯಾಣಿಕರಿಗೆ ತಿಳಿಸಿದ್ದಾರೆ. ತಕ್ಷಣವೇ ಅಷ್ಟೂ ಪ್ರಯಾಣಿಕರು ಬಸ್ಸಿನಿಂದ ಇಳಿದಿದ್ದಾರೆ. ಪ್ರಯಾಣಿಕರು ಇಳಿಯುತ್ತಿದ್ದಂತೆಯೇ ಬ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಇದೇ ವೇಳೆ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅದೃಷ್ಟವಶಾತ್ ಯಾರೊಬ್ಬರು ಘಟನೆಯಲ್ಲಿ ಗಾಯಗೊಂಡಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.