ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿ – 15 ಕ್ಕೂ ಅಧಿಕ ಜನರಿಗೆ ಗಾಯ

By
1 Min Read

ವಿಜಯಪುರ: ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ ಪಲ್ಟಿಯಾದ (Bus Overturn) ಘಟನೆ ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್‌ನಲ್ಲಿ ನಡೆದಿದೆ.

ಬಸ್‌ನ ಎಕ್ಸಲ್ ಕಟ್ ಆದ ಹಿನ್ನೆಲೆ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ 40 ಕ್ಕೂ ಅಧಿಕ ಪ್ರಯಾಣಿಕರಿದ್ದರು. ಅಪಘಾತದ ಹಿನ್ನೆಲೆ 15 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರದ ಮತಕೇಂದ್ರ ತರಬೇತಿಗೆ ಸಿಬ್ಬಂದಿಯನ್ನು ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು. ಸಿಂದಗಿಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಆಡಿ ಕಾರು, ಬೈಕ್ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

ಘಟನೆಯ ವಿಷಯ ತಿಳಿದು ಮುದ್ದೇಬಿಹಾಳ ಚುನಾವಣಾಧಿಕಾರಿ ಚಂದ್ರಕಾಂತ್ ಪವಾರ್ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಧಾರಾಕಾರ ಸುರಿದ ಮಳೆಗೆ ಮನೆ ಕುಸಿತ – 20 ದಿನದ ಹಸುಗೂಸು, ವೃದ್ಧೆ ಸಾವು

Share This Article