ನಾಳೆಯಿಂದ ರಸ್ತೆಗಿಳಿಯಲ್ಲ ಬಸ್? – ಇಂದು ಸಿಎಂ ಸಭೆ, ಖಾಸಗಿ ಬಸ್‌ಗಳನ್ನ ರಸ್ತೆಗಿಳಿಸಲು ಜಿಲ್ಲಾಡಳಿತ ಕ್ರಮ

Public TV
3 Min Read

ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಗಸ್ಟ್ 5ರಂದು ರಾಜ್ಯಾದ್ಯಾಂತ ಸಾರಿಗೆ ನೌಕರರು (Transport employees) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಇದ್ದರಿಂದ ಎಚ್ಚೆತ್ತುಕೊಂಡಿರುವ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಸರ್ಕಾರಿ ಬಸ್‌ಗಳ ಬದಲು ಖಾಸಗಿ ಬಸ್‌ಗಳನ್ನ (Private Bus) ರಸ್ತೆಗಿಳಿಸೋಕೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದೆ.

ಹೌದು, ಈ ಹಿಂದೆಯೂ ಸಹ ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದ ಸಾರಿಗೆ ನೌಕರರು ಈಗ ಮತ್ತೆ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರು | Forgive Me ಅಂತ ಡೆತ್‌ ನೋಟ್‌ ಬರೆದಿಟ್ಟು 13ರ ಬಾಲಕ ಆತ್ಮಹತ್ಯೆ

ಹೀಗಾಗಿ ಮುಷ್ಕರ ಬೇಡ ಅಂತ ಸಾರಿಗೆ ನೌಕರರ ಸಂಘಟನೆಗಳ ಜೊತೆ ಸ್ವತಃ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಆದ್ರೆ ಸಭೆಯಲ್ಲಿ ಸಿಎಂ ನಿರ್ಧಾರ ಏನು ಎಂಬ ಕೂತೂಹಲ ಮನೆ ಮಾಡಿದೆ. ಇನ್ನೂ ಸಂಘಟನೆಯ ಮುಖಂಡರು ಸಹ ಈ ಬಾರಿ ಜೋರಾಗಿಯೇ ಪ್ರತಿಭಟಿಸಿ ಹೋರಾಟ ಮಾಡೋಕೆ ಸಕಲ ತಯಾರಿಗಳನ್ನ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಪ್ರವಾಹ – 12 ಮಂದಿ ಸಾವು, ಪ್ರಯಾಗ್‌ರಾಜ್‌ ಬಹುತೇಕ ಮುಳುಗಡೆ

ಒಂದು ವೇಳೆ ಮಂಗಳವಾರ ಮುಷ್ಕರ ಆರಂಭವಾದರೆ ಸಹಜವಾಗಿಯೇ ಸಾರ್ವಜನಿಕರಿಗೆ ಸಮಸ್ಯೆ ತಪ್ಪಿದ್ದಲ್ಲ. ಹೀಗಾಗಿ ಎಚ್ಚೆತ್ತಿರುವ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅಂದು ಸಾರಿಗೆ ಬಸ್‌ಗಳ ಬದಲಾಗಿ ಖಾಸಗಿ ವಾಹನಗಳನ್ನ ರಸ್ತೆಗಿಳಿಸೋಕೆ ಪ್ಲಾನ್ ಮಾಡಿದೆ.

ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯಲ್ಲಿ ಪ್ರತಿನಿತ್ಯ 584 ಬಸ್‌ಗಳು ಸಂಚಾರ ಮಾಡುತ್ತಿದ್ದು, 3400ಕ್ಕೂ ಹೆಚ್ಚು ಟ್ರಿಪ್‌ಗಳನ್ನ ಮಾಡುತ್ತಿದ್ದು ಸಾವಿರಾರು ಮಂದಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನ ಅವಲಂಬಿಸಿದ್ದಾರೆ. ಹೀಗಾಗಿ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆ ಆಗಬಾರದೆಂದು ಮುಂದಾಲೋಚನೆ ಮಾಡಿರುವ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಈಗಾಗಲೇ ಖಾಸಗಿ ವಾಹನಗಳ ಮಾಲೀಕರ ಜೊತೆ ಸಭೆ ನಡೆಸಿದ್ದಾರೆ. ಇದನ್ನೂ ಓದಿ: ಕೈದಿ ನಂ. 15528 – ಪ್ರಜ್ವಲ್‍ಗೆ 524 ರೂ. ದಿನಗೂಲಿ, ಕೆಲಸವೇನು ಗೊತ್ತಾ?

ಜಿಲ್ಲೆಯಲ್ಲಿರುವ 200ಕ್ಕೂ ಹೆಚ್ಚು ಸ್ಟೇಜ್ ಹಾಗೂ ಕಂಟ್ರ‍್ಯಾಕ್ಟ್ ಕ್ಯಾರೇಜ್ ಖಾಸಗಿ ಬಸ್‌ಗಳನ್ನ ರಸ್ತೆಗಿಳಿಸಲು ಮಾತುಕತೆ ಮಾಡಿದ್ದಾರೆ. ಇದರ ಜೊತೆಗೆ ಜಿಲ್ಲೆಯಲ್ಲಿರುವ 587 ಶಾಲಾ ಬಸ್‌ಗಳನ್ನ ಬಳಸಿಕೊಳ್ಳಲು ಶಾಲೆಗಳ ಮಾಲೀಕರು ಜೊತೆ ಸಮಾಲೋಚನೆ ಮಾಡಿದ್ದಾರೆ. ಮತ್ತೊಂದು ಕಡೆ ಸ್ಥಳೀಯವಾಗಿ ಆಟೋಗಳನ್ನ ಸಹ ಬಳಸಿಕೊಳ್ಳೋಕೆ ನಿರ್ಧಾರ ಮಾಡಲಾಗಿದೆ.

ಚಾಮರಾಜನಗರದಲ್ಲೂ ಖಾಸಗಿ ಬಸ್, ಟ್ಯಾಕ್ಸಿ ಮೊರೆ
ಸಾರಿಗೆ ನೌಕರರ ಮುಷ್ಕರಕ್ಕೆ ಪ್ಲ್ಯಾನ್ ಹಿನ್ನೆಲೆಯಲ್ಲಿ ಖಾಸಗಿ ಬಸ್, ಮ್ಯಾಕ್ಸಿ ಕ್ಯಾಬ್, ಆಟೋ ಸೇರಿದಂತೆ ಬದಲಿ ವ್ಯವಸ್ಥೆ ಮಾಡಿಕೊಳ್ಳಲು ಈಗಾಗಲೇ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಜನರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬದಲಿ ವ್ಯವಸ್ಥೆ ಮಾಡಿಕೊಳ್ಳಲೂ ನಿರ್ಧರಿಸಿದೆ. ಇದನ್ನೂ ಓದಿ: ಕೆಲವರು ಅಧಿಕಾರ ಹಂಚಿಕೊಳ್ಳಲು ಒಪ್ಪಲ್ಲ – ಸಿದ್ದರಾಮಯ್ಯಗೆ ಟಾಂಗ್‌ ಕೊಟ್ರಾ ಡಿಕೆಶಿ?

ಈಗಾಗಲೇ ಈ ಸಂಬಂಧ ಅಧಿಕಾರಿಗಳಿಗೂ ಕೂಡ ಸೂಚಿಸಲಾಗಿದೆ. ಲಭ್ಯವಿರುವ ಎಲ್ಲ ಕಡೆಯೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಚಾಮರಾಜನಗರ (Chamarajanagara) ಡಿಸಿ ಶಿಲ್ಪಾನಾಗ್ ಮಾಹಿತಿ ಕೊಟ್ಟಿದ್ದಾರೆ.

ಇತ್ತ ರಾಯಚೂರು (Raichur) ಜಿಲ್ಲಾಡಳಿತದಿಂದ ಪರ್ಯಾಯ ವ್ಯವಸ್ಥೆಗೆ ಸಿದ್ಧತೆ ನಡೆದಿದೆ. ರಾಯಚೂರಿನಲ್ಲಿ ಖಾಸಗಿ ಹಾಗೂ ಶಾಲಾ ಬಸ್‌ಗಳ ಬಳಕೆಗೆ ಜಿಲ್ಲಾಡಳಿತ ಮುಂದಾಗಿದೆ. ಸೋಮವಾರ ಸಭೆ ಕರೆದಿರುವ ಜಿಲ್ಲಾಡಳಿತ, ಸಭೆಯಲ್ಲಿ ಖಾಸಗಿ ವಾಹನಗಳ ಬಳಕೆ ಹಾಗೂ ದರ ನಿಗದಿ ಬಗ್ಗೆ ಚರ್ಚೆ ಮಾಡಲಿದೆ. ಇದನ್ನೂ ಓದಿ: ಗ್ರೌಂಡ್‌ ಪೆನೆಟ್ರೇಟಿಂಗ್ ರೇಡಾರ್‌ನಿಂದ ಅಸ್ಥಿಪಂಜರ ಪತ್ತೆ ಕಾರ್ಯ ನಡೆಸಿ – ಎಸ್‌ಐಟಿಗೆ ದೂರುದಾರ ಹೊಸ ರಿಕ್ವೆಸ್ಟ್‌

373 ಶಾಲಾ ಬಸ್, 60 ಮಿನಿ ಬಸ್ ಸೇರಿ ಒಟ್ಟು 738 ವಾಹನಗಳನ್ನ ಗುರುತಿಸಿರುವ ಜಿಲ್ಲಾಡಳಿತ ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಕರ ಅನುಕೂಲಕ್ಕಾಗಿ ಖಾಸಗಿ ವಾಹನಗಳ ಬಳಕೆಗೆ ಜಿಲ್ಲಾಡಳಿತ ಮುಂದಾಗಿದೆ. ಇನ್ನೂ ಖಾಸಗಿ ಚಾಲಕರು ಹಾಗೂ ಸಾರಿಗೆ ಇಲಾಖೆ ಟ್ರೈನಿ ಚಾಲಕರ ಬಳಕೆ ಮಾಡಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಅಂತರರಾಜ್ಯ ಪ್ರಯಾಣಕ್ಕಾಗಿ ಆಂಧ್ರಪ್ರದೇಶದಿಂದ ಹೆಚ್ಚುವರಿ ಬಸ್ ಓಡಾಟಕ್ಕೆ ಕರ್ನೂಲ್ ಜಿಲ್ಲಾಡಳಿತ ಜೊತೆ ಚರ್ಚಿಸಲಾಗಿದೆ.

ಒಟ್ಟಿನಲ್ಲಿ ಸಿಎಂ ಸಭೆಯ ನಂತರವಷ್ಟೇ ಮುಷ್ಕರ ರದ್ದಾಗುತ್ತಾ, ಇಲ್ಲ ಆರಂಭವಾಗುತ್ತಾ ಅನ್ನೋ ನಿರ್ಧಾರ ಹೊರಬರಬೇಕಿದೆ. ಆದ್ರೂ ಒಂದು ವೇಳೆ ಮುಷ್ಕರ ಆರಂಭವೇ ಆದರೆ ಖಾಸಗಿ ಬಸ್‌ಗಳ ಮೂಲಕವೇ ಸಾರ್ವಜನಿಕರಿಗೆ ಸಂಪೂರ್ಣ ಸೇವೆ ಒದಗಿಸೋದು ಕಷ್ಟ ಸಾಧ್ಯವಾಗಬಹುದು.

Share This Article