ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು, 100 ಕ್ವಿಂಟಾಲ್ ಹತ್ತಿ ಭಸ್ಮ – ಲಕ್ಷಾಂತರ ರೂ. ಮೌಲ್ಯದ ಬೆಳೆ ನಾಶ

Public TV
1 Min Read

ರಾಯಚೂರು: ಜಿಲ್ಲೆಯ ಮಾನ್ವಿ (Manvi) ತಾಲೂಕಿನ ನೀರಮಾನ್ವಿಯ (Neermanvi) ಜಮೀನೊಂದರಲ್ಲಿ ಆಕಸ್ಮಿಕ ಬೆಂಕಿಗೆ ಗುಡಿಸಲು, ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಹತ್ತಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮವಾಗಿವೆ.ಇದನ್ನೂ ಓದಿ: ವಕ್ಫ್ ವಿವಾದಕ್ಕೆ ಬೇಸತ್ತು ಯುವ ರೈತ ಆತ್ಮಹತ್ಯೆ!

ರೈತ ಪರಶುರಾಮ ಅವರಿಗೆ ಸೇರಿದ ಜಮೀನಿನಲ್ಲಿನ ಗುಡಿಸಲು ಹಾಗೂ 100 ಕ್ವಿಂಟಾಲ್ ಹತ್ತಿ ನಾಶವಾಗಿದೆ. ಅವಘಡದಲ್ಲಿ ಗುಡಿಸಲಿನಲ್ಲಿದ್ದ 50 ಸಾವಿರ ರೂ. ನಗದು, ಧವಸ ಧಾನ್ಯ ಭಸ್ಮವಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ನಂದಿಸಲು ಸ್ಥಳೀಯರು ಯತ್ನಿಸಿದ್ದು, ಬೆಂಕಿ ಕೆನ್ನಾಲಿಗೆಗೆ ಸಿಕ್ಕು ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿವೆ. ಬೆಂಕಿ ಅವಘಡಲ್ಲಿ ಒಟ್ಟು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಕೃಷಿ ತ್ಯಾಜ್ಯಕ್ಕೆ ಬೆಂಕಿ: ದಂಡ ದುಪ್ಪಟ್ಟುಗೊಳಿಸಿ ಕೇಂದ್ರ ಸರ್ಕಾರ ಆದೇಶ

Share This Article