ವಿಜಯೇಂದ್ರಗೆ ಮೋದಿ, ಅಮಿತ್‌ ಶಾ ಮಹತ್ವದ ಹೊಣೆ ನೀಡಿದ್ದಾರೆ: ಎಸ್.ಎಂ ಕೃಷ್ಣ ಶ್ಲಾಘನೆ

Public TV
2 Min Read

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಅವರಿಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರನ್ನು (SM Krishna) ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು.

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಸ್.ಎಂ ಕೃಷ್ಣ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರರನ್ನ ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಹತ್ತಾರು ವರ್ಷಗಳಿಂದ ಬಿಜೆಪಿಯನ್ನು (BJP) ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪನವರು (Yediyurappa) ಶ್ರಮಿಸಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

ಯಡಿಯೂರಪ್ಪ ಅವರು ಕಟ್ಟಿದ ಅಸ್ಥಿಭಾರದ ಮೇಲೆ ವಿಜಯೇಂದ್ರ ಅವರು ಬೃಹತ್ತಾಗಿ ಪಕ್ಷವನ್ನು ಕಟ್ಟುವ ಹಾಗೂ ಮುಂದಿನ ಲೋಕಸಭಾ ಚುನಾವಣೆ, ನಂತರ ಬರುವ ಸ್ಥಳೀಯ ಚುನಾವಣೆಗಳಲ್ಲಿ ತಮ್ಮ ಛಾಪನ್ನು ಒತ್ತಿ ತೋರಿಸುವ ದೊಡ್ಡ ಜವಾಬ್ದಾರಿ ಹೊರಲಿದ್ದಾರೆ. ಈ ಯುವ ಹೆಗಲಿನ ಮೇಲೆ ಅಂತಹ ಹೊಣೆ ನೀಡಲಾಗಿದೆ. ಈ ಪ್ರತಿಭೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi), ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಜೆ.ಪಿ ನಡ್ಡಾರವರು (JP Nadda) ಮಹತ್ವದ ಹೊಣೆ ನೀಡಿದ್ದಾರೆ. ವಿಜಯೇಂದ್ರರಿಗೆ ಎಲ್ಲ ರೀತಿಯಿಂದಲೂ ಯಶಸ್ಸು ಸಿಗಲೆಂದು ಹಾರೈಸುವುದಾಗಿ ತಿಳಿಸಿದರು.

ಯುವಕರಿಗೆ ಅಧ್ಯಕ್ಷ ಸ್ಥಾನ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಂದಲ್ಲ ನಾಳೆ ಯುವ ಪ್ರತಿಭೆಗಳು ಹೊರಹೊಮ್ಮಬೇಕು. ಅವರ ಜೊತೆ ಹಿರಿಯರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಅದಕ್ಕೆ ನಾವು ಅನುವು ಮಾಡಿಕೊಟ್ಟು ಅವರ ಕೈಗಳನ್ನು ಬಲಪಡಿಸಬೇಕು. ಅವರಿಗೆ ಮಾರ್ಗದರ್ಶನ ನೀಡಬೇಕು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ನಿನ್ನ ನೇತೃತ್ವದಲ್ಲಿ ಪಕ್ಷಕ್ಕೆ ಶಕ್ತಿ ತುಂಬೋಣ – ಬೊಮ್ಮಾಯಿ ಆಶೀರ್ವಾದ ಪಡೆದ ವಿಜಯೇಂದ್ರ

ಶಾಸಕರಾದ ಕೃಷ್ಣಪ್ಪ, ಸಿ.ಕೆ ರಾಮಮೂರ್ತಿ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಇದನ್ನೂ ಓದಿ: ಹಬ್ಬಕ್ಕೆ ಬಟ್ಟೆ ಕೊಂಡೊಯ್ಯುತ್ತಿದ್ದ ಪುರಸಭೆ ಸದಸ್ಯನ ತಡೆದು ಮಾರಕಾಸ್ತ್ರದಿಂದ ಹಲ್ಲೆ

Share This Article