ವಿಜಯೇಂದ್ರ ಪದಗ್ರಹಣಕ್ಕೆ ಗೈರು? – ಕೈ ನಾಯಕರ ಜೊತೆ ಕಾರ್ಯಕ್ರಮದಲ್ಲಿ ಎಸ್‌ಟಿಎಸ್ ಭಾಗಿ?

Public TV
1 Min Read

ಬೆಂಗಳೂರು: ಇಂದು ಬಿಜೆಪಿಯ (BJP) ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ (BY Vijayendra) ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಆದರೆ ಇಂದು ನಡೆಯಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿಯ ಕೆಲ ನಾಯಕರು ಗೈರಾಗುವ ಸಾಧ್ಯತೆಯಿದೆ. ಅದರಲ್ಲೂ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ (ST Somashekhar) ಅವರು ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗುವ ಸಾಧ್ಯತೆಯಿದೆ.

ಇಂದು ಬೆಳಗ್ಗೆ 10:35ಕ್ಕೆ ಕುಂಬಳಗೋಡು ಪೊಲೀಸ್ ಸ್ಟೇಷನ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಎಸ್ ಟಿ ಸೋಮಶೇಖರ್ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಪರಮೇಶ್ವರ್, ರಾಮಲಿಂಗಾ ರೆಡ್ಡಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಇತ್ತೀಚೆಗಷ್ಟೇ ಸೋಮಶೇಖರ್ ಅವರು ಸ್ವಪಕ್ಷದ ಬಗ್ಗೆ ಭಾರೀ ಅಸಮಾಧಾನವನ್ನು ಹೊರಹಾಕಿದ್ದರು. ಜಿಜೆಪಿಯವರು ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ, ಅಧಿಕಾರ ಮುಗಿದಮೇಲೆ ವಿಷ ಕೊಡುತ್ತಾರೆ ಎಂದು ಖಾರವಾಗಿ ನುಡಿದಿದ್ದರು.

ನಾನು ಕಾಂಗ್ರೆಸ್‌ನಲ್ಲಿದ್ದವನು, ಅವರಾಗೇ ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡರು. ಈಗ ಎಸ್‌ಟಿ ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನು ಬಿಡಿಸಲು ಪಕ್ಷದವರು ರೆಡಿಯಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಉಡುಪಿಯಲ್ಲಿ ನಾಲ್ವರ ಬರ್ಬರ ಹತ್ಯೆ – 10ಕ್ಕೂ ಹೆಚ್ಚು ಮಂದಿ ವಶಕ್ಕೆ, ಸಾಂಗ್ಲಿಯ ಶಂಕಿತನ ಮೇಲೆ ಅನುಮಾನ ಜಾಸ್ತಿ ಯಾಕೆ?

ಸ್ವಪಕ್ಷದ ಬಗ್ಗೆ ಭಾರೀ ಅಸಮಾಧಾನ ಹೊರಹಾಕಿದ ಬಳಿಕ ಬಿಜೆಪಿ ಶಾಸಕ ಕಾಂಗ್ರೆಸ್ ಕಡೆಗೆ ಮತ್ತೆ ಮುಖ ಮಾಡಿದ್ದಾರೆ ಎನ್ನುವ ಗುಸುಗುಸು ಪ್ರಾರಂಭವಾಗಿದೆ. ಇದೀಗ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಗೈರಾಗಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟಿರುವ ಸೋಮಶೇಖರ್ ನಡೆ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.

ಪ್ರಮುಖರು ಗೈರು ಸಾಧ್ಯತೆ?
ಸಿ.ಟಿ ರವಿ, ಬಸನಗೌಡ ಪಾಟೀಲ್ ಯತ್ನಾಳ್, ವಿ ಸೋಮಣ್ಣ, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ, ಡಾ.ಕೆ ಸುಧಾಕರ್, ಎಸ್‌ಟಿ ಸೋಮಶೇಖರ್, ಸುನೀಲ್ ಕುಮಾರ್ ಗೈರಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ನಿಧನ

Share This Article