ಕೊಪ್ಪಳ: ಭಾರತೀಯ ಜನತಾ ಪಾರ್ಟಿಯೊಂದೇ ಹಿಂದೂಗಳ ಬಗ್ಗೆ ಆಲೋಚನೆಯನ್ನು ಮಾಡುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದೆ. ಅವರು ಎಂದಿಗೂ ಹಿಂದೂಗಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿಲ್ಲ. ಎಂದರು.
ಮುಖ್ಯಮಂತ್ರಿ ಬದಲಾವಣೆಯ ಕುರಿತು ಯಾವುದೇ ಚಿಂತನೆಯಿಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯಾರೂ ಮಾತನಾಡಿಲ್ಲ. ಆದರೂ ಇಂತಹ ಕಲ್ಪಿತ ವಿಚಾರಗಳು ಇತ್ತೀಚೆಗೆ ಕೇಳಿ ಬರುತ್ತಿವೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿಯೇ ಮುಂದುವರಿಯುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ
ಅಂಜನಾದ್ರಿ ಅಭಿವೃದ್ಧಿ ವಿಚಾರವಾಗಿ ಮಾತನಾಡಿದ ಅವರು, ಅಂಜನಾದ್ರಿ ಅಭಿವೃದ್ಧಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಹಣ ನೀಡುತ್ತೇನೆ ಎಂದು ಹೇಳಿದ್ದಾರೆ. ಅಂಜನಾದ್ರಿ ಅಭಿವೃದ್ಧಿ ಸದ್ಯದಲ್ಲೇ ಆಗುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ದೇಶಾದ್ಯಂತ ಮೊದಲ ದಿನ 40 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ