ಸಿಎಂ ಮೊದಲು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಉತ್ತರ ನೀಡಲಿ: ವಿಜಯೇಂದ್ರ ಸವಾಲು

Public TV
2 Min Read

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಸವಾಲು ಹಾಕಿದ್ದಾರೆ.

ಕೊಪ್ಪಳದಲ್ಲಿ (Koppala) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರ ಪ್ರಶ್ನೆಗೆ ಉತ್ತರಿಸಿ. ನಂತರ ವಿರೋಧ ಪಕ್ಷದವರ ವಿರುದ್ಧ ಸವಾಲು ಹಾಕಲಿ. ಇಡೀ ರಾಜ್ಯದ ಜನ ಮೈಸೂರಿನ (Mysuru) ಸಮಾವೇಶದಲ್ಲಿ ಏನು ನಡೆದಿದೆ ಎನ್ನುವುದನ್ನು ನೋಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಪಂಚ ಭಾಗ – ಕೇಸರಿ ತೀವ್ರ ವಿರೋಧ, ಹೋರಾಟದ ಎಚ್ಚರಿಕೆ

ಎಲ್ಲಾ ಕ್ಷೇತ್ರಗಳಲ್ಲಿ ಅನುದಾನವಿಲ್ಲದೆ ಶಾಸಕರು ಪರದಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಕಾಂಗ್ರೆಸ್ ಶಾಸಕರಿಗೆ ಮಾತ್ರ ಮುಖ್ಯಮಂತ್ರಿಗಳೋ ಎನ್ನುವ ರೀತಿಯಲ್ಲಿ ರಾಜ್ಯದ ಜನರು ಚರ್ಚೆ ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿಯನ್ನು ಮುಗಿಸಲು ನಡೆಸಿದ ಸಮಾವೇಶ: ಆರ್.ಅಶೋಕ್

ಅಭಿವೃದ್ಧಿಗೆ 50 ಕೋಟಿ ರೂ. ಅನುದಾನ ನೀಡುತ್ತೇವೆ ಎಂದು ಯಾವುದೇ ದಾಖಲೆಯನ್ನು ಸಿಎಂ ನೀಡಿಲ್ಲ. ಕಾಂಗ್ರೆಸ್ ಶಾಸಕರಿಗೆ ಮಾತ್ರ ಪತ್ರವನ್ನು ಬರೆದಿದ್ದಾರೆ. 50 ಕೋಟಿ ರೂ. ಅನುದಾನ ಬರುವುದಕ್ಕೆ ಎಷ್ಟು ದಿನ ಕಾಯಬೇಕೋ ಗೊತ್ತಿಲ್ಲ. ಆದರೆ ವಿರೋಧ ಪಕ್ಷದವರಿಗೆ ಅನುದಾನ ಕೊಡುವ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ ಎಂದು ಕಿಡಿಕಾರಿದ್ದಾರೆ.

ಆಡಳಿತ ಪಕ್ಷದಲ್ಲಿ ಕುದುರೆ ವ್ಯಾಪಾರ ಜೋರು
ಕಾಂಗ್ರೆಸ್ ಪಕ್ಷದಲ್ಲಿ ಯಾರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಒಳಗೊಳಗೆ ಸಮಾಲೋಚನೆಗಳು ನಡೆಯುತ್ತಿವೆ. ಆಡಳಿತ ಪಕ್ಷದಲ್ಲಿ ಕುದುರೆ ವ್ಯಾಪಾರವು ಕೂಡ ಭರ್ಜರಿಯಾಗಿ ಪ್ರಾರಂಭವಾಗುವ ಮುನ್ಸೂಚನೆಗಳು ಗೋಚರವಾಗುತ್ತಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನಾನು ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು.. ನನಗೆ ಪಾಪಪ್ರಜ್ಞೆ ಕಾಡುತ್ತಿದೆ: ದೂರುದಾರ ಹೇಳಿದ್ದೇನು?

ಆಡಳಿತ ಪಕ್ಷದ ಶಾಸಕರೇ ತಮ್ಮ ವಿರುದ್ಧ ತಿರುಗಿ ಬೀಳುವ ಸಂದರ್ಭದಲ್ಲಿ 50 ಕೋಟಿ ರೂ. ಅನುದಾನ ನೀಡುವುದಕ್ಕೆ ಸಿಎಂ ನಿರ್ಧಾರ ಮಾಡಿದ್ದಾರೆ. ಆದರೆ ಆಡಳಿತ ಪಕ್ಷದ ಶಾಸಕರಿಗೆ ಸಿಎಂ ಮೇಲೆ ವಿಶ್ವಾಸ ಇಲ್ಲದಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರ ಪರಿಣಾಮವೇ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ಪದೇ ಪದೇ ಕರ್ನಾಟಕಕ್ಕೆ ಬಂದು ಶಾಸಕರನ್ನು ಸಮಾಧಾನ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ಇದನ್ನೂ ಓದಿ: ವೆಜ್ ಬದಲು ಚಿಕನ್ ಪಿಜ್ಜಾ ಕಳಿಸಿದ ಡಾಮಿನೋಸ್ – 50,000 ರೂ. ದಂಡ

ಮೈಸೂರಿನ ಸಮಾವೇಶದಲ್ಲಿ ಕ್ರಾಂತಿಯ ಸುಳಿವು
ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ನವೆಂಬರ್ ಅಥವಾ ಅದಕ್ಕಿಂತ ಮುಂಚಿತವಾಗಿ ಕ್ರಾಂತಿಯಾಗುವ ಬಗ್ಗೆ ಮೈಸೂರಿನ ಸಮಾವೇಶದಲ್ಲಿ ಸಿಎಂ ಮತ್ತು ಡಿಸಿಎಂ ಡಿಕೆಶಿ ಅವರು ಸುಳಿವು ನೀಡಿದ್ದಾರೆ ಎಂದು ಹೇಳಿದ್ದಾರೆ.

ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಸರ್ಕಾರ ಮುಳುಗಿ ಹೋಗಿದೆ. ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸ ಕಾರ್ಯಗಳು ಆಗುತ್ತಿಲ್ಲ. ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರದ ನೇತೃತ್ವದ ಬಗ್ಗೆ ರಾಜ್ಯದಲ್ಲಿ ಎಲ್ಲಿ ಹೋಗಿ ವಿಚಾರಿಸಿದರೂ ರಾಜ್ಯದ ಜನ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Share This Article