ವಿಜಯೇಂದ್ರಗೆ ಹಾರ ಹಾಕಿ, ಶಾಲು ಹೊದಿಸಿ ತಬ್ಬಿಕೊಂಡು ಶುಭಕೋರಿದ ಸಿ.ಟಿ.ರವಿ

Public TV
1 Min Read

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಬಿ.ವೈ.ವಿಜಯೇಂದ್ರ (Vijayendra) ಅವರನ್ನು ಮಾಜಿ ಸಚಿವ ಸಿ.ಟಿ.ರವಿ ಅಭಿನಂದಿಸಿದ್ದಾರೆ.

ಸೋಮವಾರ ವಿಜಯೇಂದ್ರ ಅವರ ನಿವಾಸಕ್ಕೆ ಆಗಮಿಸಿದ ಸಿ.ಟಿ.ರವಿ (C.T.Ravi) ಅವರು ನೂತನ ಅಧ್ಯಕ್ಷರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಶುಭಕೋರಿದ್ದಾರೆ. ಇದರ ಫೋಟೋಗಳನ್ನು ವಿಜಯೇಂದ್ರ ಅವರು ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಪಟಾಕಿ ಸೌಂಡ್ ಜೋರು; ಕಣ್ಣಿಗೆ ಹಾನಿಯಾಗಿ 25ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ

ಇಂದು ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ಸಿ.ಟಿ.ರವಿ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಕೋರಿ, ಅವರ ಸಲಹೆ ಹಾಗೂ ಮಾರ್ಗದರ್ಶನ ಕೋರಲಾಯಿತು ಎಂದು ವಿಜಯೇಂದ್ರ ಬರೆದುಕೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಸಿ.ಟಿ.ರವಿ ಅವರು ಸ್ಥಾನ ಕೈತಪ್ಪಿದ್ದಕ್ಕೆ ನಿರಾಸೆಗೊಂಡಿದ್ದರು ಎನ್ನಲಾಗಿತ್ತು. ಇವರ ಜೊತೆಗೆ ಆಕಾಂಕ್ಷಿಗಳಾಗಿದ್ದ ವಿ.ಸೋಮಣ್ಣ, ಅರವಿಂದ್‌ ಬೆಲ್ಲದ್‌ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನ ವಹಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಬೇಡ ಅಂದ್ರೆ ಮನೆಯಲ್ಲಿರ್ತೀನಿ – ಸಿ.ಟಿ ರವಿ

ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಬೇಸರವಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ಸಿ.ಟಿ.ರವಿ ಕೊನೆಗೂ ವಿಜಯೇಂದ್ರರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ. ಇದರ ನಡುವೆ ಅಸಮಾಧಾನಿತ ನಾಯಕರನ್ನು ಸಮಾಧಾನ ಪಡಿಸುವ ಕಾರ್ಯವನ್ನು ಬಿ.ಎಸ್‌.ಯಡಿಯೂರಪ್ಪ ಮಾಡುತ್ತಿದ್ದಾರೆ ಎನ್ನಲಾಗಿದೆ. ಎಲ್ಲರಿಗೂ ಫೋನ್‌ ಕರೆ ಮಾಡಿ ಪಕ್ಷ ಸಂಘಟನೆಗೆ ಒಗ್ಗಟ್ಟಾಗಿರೋಣ ಎಂಬ ಸಂದೇಶವನ್ನು ಬಿಎಸ್‌ವೈ ರವಾನಿಸುತ್ತಿದ್ದಾರೆ.

Share This Article