ರಾಜ್ಯ ಸರ್ಕಾರದ್ದು ಹುಲಿ ಉಗುರು ಎಂಬ ಸದಾರಮೆ ನಾಟಕ: ಸಿ.ಟಿ. ರವಿ ವಾಗ್ದಾಳಿ

By
2 Min Read

ಚಿಕ್ಕಮಗಳೂರು: ರಾಜ್ಯ ಸರ್ಕಾರದ್ದು ಹುಲಿ ಉಗುರು (Tiger Claw Row) ಎಂಬ ಸದಾರಮೆ ನಾಟಕ. ರಾಜ್ಯದ ಜನರ ದಾರಿ ತಪ್ಪಿಸಲು ಕಾಂಗ್ರೆಸ್‌ ಹುಲಿ ಉಗುರಿನ ನಾಟಕವಾಡುತ್ತಿದೆ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ. ರವಿ (C.T.Ravi) ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಸಿ.ಟಿ.ರವಿ ಅವರು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಐಟಿ ದಾಳಿಯಲ್ಲಿ ಪತ್ತೆಯಾದ ಕೋಟ್ಯಂತರ ಹಣದ ಚರ್ಚೆಯ ದಾರಿ ತಪ್ಪಿಸುವ ನಾಟಕವನ್ನು ಕಾಂಗ್ರೆಸ್‌ ಆಡಿದೆ. ಜನರ ಆಕ್ರೋಶಕ್ಕೆ ವಿರಾಮ ಹಾಕಲು, ಕಮಿಷನ್ ಕಲೆಕ್ಟರ್ (CM), ಡೆಪ್ಯೂಟಿ ಕಮಿಷನ್ ಕಲೆಕ್ಟರ್ (DCM) ಅವರ ಹುಲಿ ಉಗುರು ನಾಟಕ ಇದು ಎಂದು ಕಾಲೆಳೆದಿದ್ದಾರೆ. ಇದನ್ನೂ ಓದಿ: ಹುಲಿ ಉಗುರು ಲಾಕೆಟ್‌ ಕೇಸ್‌ – ವರ್ತೂರು ಸಂತೋಷ್‌ಗೆ ಜಾಮೀನು ಮಂಜೂರು

ಜನ ನೂರಾರು ವರ್ಷಗಳಿಂದ ಹುಲಿ ಉಗುರನ್ನ ಆಭರಣವಾಗಿ ಧರಿಸಿದ್ದಾರೆ. ಇಲಾಖೆಗೆ ಕಾಣದ್ದೇನು ಅಲ್ಲ. ಈಗ ಸರ್ಕಾರದ ವೈಫಲ್ಯ, ಬೋಗಸ್ ಭರವಸೆಗಳಿಗೆ ಜನ ಆಕ್ರೋಶಿತರಾಗಿದ್ದಾರೆ. ರೈತರಿಗೆ ವಿದ್ಯುತ್ ಪೂರೈಸುತ್ತಿಲ್ಲ, ಕತ್ತಲೆ ಭಾಗ್ಯ, ಬರ ಪರಿಸ್ಥಿತಿ ನಿರ್ವಹಣೆ ವೈಫಲ್ಯ, ಶಾಸಕರು ಬಂಡಾಯದ ಬಸ್ ಹತ್ತುತ್ತಿರುವ ಬೇಗುದಿ, ಪಂಚರಾಜ್ಯ ಚುನಾವಣೆಗೆ ನಡೆಸಿದ ಕಲೆಕ್ಷನ್ ಐಟಿ ಇಲಾಖೆ ಪಾಲು, ಸರ್ಕಾರಕ್ಕೆ ಜನರ ಎದುರು ತಲೆಯೆತ್ತಿ ನಡೆಯಲಾಗುತ್ತಿಲ್ಲ ಎಂದು ಕುಟುಕಿದ್ದಾರೆ.

ಒಮ್ಮೆ ನಿಮ್ಮ ಮಂತ್ರಿಮಂಡಲದ ಒಳಗೆ ಇಣುಕಿ ನೋಡಿ, ಕಾಡು ಪ್ರಾಣಿ ಬಂಧನದಲ್ಲಿರಿಸಿ ಹತ್ಯೆ ಮಾಡಿದವರು ಸಿಕ್ಕಿಯಾರು. ಜನಸಾಮಾನ್ಯರಿಗೆ FSL ವರದಿ ಬರುವುದಕ್ಕೆ ಮುಂಚೆಯೇ ಬಂಧನ. ಸೆಲೆಬ್ರಿಟಿಗಳಿಗೆ ನೋಟಿಸ್… ಇದೆಲ್ಲವೂ ಈ ನಾಟಕದ ಭಾಗವಲ್ಲವೇ? ಇದು ನಿಮ್ಮ ಸರ್ಕಾರದ ಪ್ರಾಮಾಣಿಕತೆಯ ಬಗ್ಗೆ ಸಂಶಯ ಮೂಡಿಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹುಲಿ ಉಗುರಿನ ಕಂಟಕ – ಅರಣ್ಯಾಧಿಕಾರಿ ಬಂಧನ

ಹುಲಿ ಉಗುರು ಪೆಂಡೆಂಟ್‌ ಧರಿಸಿದ ಆರೋಪದಡಿ ವರ್ತೂರು ಸಂತೋಷ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಪೆಂಡೆಂಟ್‌ ಧರಿಸಿದ್ದ ಆರೋಪ ಸ್ಯಾಂಡಲ್‌ವುಡ್‌ ನಟರಾದ ದರ್ಶನ್‌, ಜಗ್ಗೇಶ್‌ ಮೇಲೂ ಕೇಳಿಬಂದಿತ್ತು. ಈ ವೇಳೆ ಅರಣ್ಯಾಧಿಕಾರಿಗಳು ನಟ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನೋಟಿಸ್‌ ಕೊಟ್ಟಿದ್ದರು. ಪ್ರಕರಣ ಸಂಬಂಧ ಈಗ ವರ್ತೂರು ಸಂತೋಷ್‌ಗೆ ಜಾಮೀನು ನೀಡಲಾಗಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್