ಜನತೆಗೆ ಮತ್ತೊಂದು ಶಾಕ್‌; ರಾಜ್ಯದ ಎಲ್ಲಾ ಬಹುಮಹಡಿ, ಎತ್ತರದ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಕ್ಯಾಬಿನೆಟ್ ಅಸ್ತು

Public TV
1 Min Read

– ಸನ್ನಡತೆ ಆಧಾರದಲ್ಲಿ ಜೀವಾವಧಿ ಶಿಕ್ಷೆ ಖೈದಿಗಳಿಗೆ ಬಿಡುಗಡೆ ಭಾಗ್ಯಕ್ಕೂ ಒಪ್ಪಿಗೆ

ಬೆಂಗಳೂರು: ಮೆಟ್ರೋ, ಬಸ್‌ ಟಿಕೆಟ್‌ ದರ, ಹಾಲಿನ ದರ ಏರಿಕೆ ಬಳಿಕ ಜಿಎಸ್‌ಟಿಯಿಂದ ತತ್ತರಿಸಿರುವ ಜನತೆ ರಾಜ್ಯ ಸರ್ಕಾರ ಮತ್ತೊಂದು ಶಾಕ್‌ ಕೊಟ್ಟಿದೆ. ಹೊಸದಾಗಿ ನಿರ್ಮಾಣ ಆಗುವ ರಾಜ್ಯದ ಎಲ್ಲಾ ರಾಜ್ಯದ ಎಲ್ಲ ಬಹುಮಹಡಿ ಮತ್ತು ಎತ್ತರದ ಕಟ್ಟಡಗಳಿಗೆ 1% ಸೆಸ್ (Cess) ವಿಧಿಸಲು ಇಂದಿನ ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ.

ಅಗ್ನಿಶಾಮಕ ದಳದ ಕಾಯ್ದೆ (Fire Service Ac) ಅನ್ವಯ ಆಗುವ ವಾಣಿಜ್ಯ ಕಟ್ಟಡಗಳು, ಕೈಗಾರಿಕಾಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು, ಅಪಾರ್ಟ್ಮೆಂಟ್ ಗಳು ಸೇರಿ ಎತ್ತರದ ಬಹುಮಹಡಿ ಕಟ್ಟಡಗಳಿಗೆ 1% ಸೆಸ್ ವಿಧಿಸಲು ಸರ್ಕಾರ ನಿರ್ಧರಿಸಿದೆ. ಇದರೊಂದಿಗೆ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಸಂಪುಟ ಸಭೆ ನಿರ್ಣಯಗಳು
* ಬೆಂಗಳೂರಿನ ಸ್ಪೇಸ್ ಟೆಕ್ ನಲ್ಲಿ ಉತ್ಕೃಷ್ಟತಾ ಕೇಂದ್ರ (ಸೆಂಟರ್ ಆಫ್ ಎಕ್ಸಲೆನ್ಸ್) ಸ್ಥಾಪನೆಗೆ ಸಂಪುಟ ಅನುಮೋದನೆ
* ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ, 50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ
* ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸುವುದು. ಜೊತೆಗೆ ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ಕ್ರಿಮಿನಲ್ ಕೇಸ್‌ಗೆ ಅಧಿಕೃತ ಒಪ್ಪಿಗೆ.
* ಕುನ್ಹಾ ವರದಿ ಶಿಫಾರಸ್ಸು ಜಾರಿಗೆ ಕ್ಯಾಬಿನೆಟ್ ಒಪ್ಪಿಗೆ – ಡಿಎನ್‌ಎ ಈವೆಂಟ್‌ ಮ್ಯಾನೆಜ್‌ಮೆಂಟ್‌ ಸಂಸ್ಥೆ ವಿರುದ್ಧವೂ ಕ್ರಿಮಿನಲ್ ಕೇಸ್
* ಇದರೊಂದಿಗೆ ಸನ್ನಡತೆ ಆಧಾರದಲ್ಲಿ ಜೀವಾವಧಿ ಶಿಕ್ಷೆ ಖೈದಿಗಳಿಗೆ ಬಿಡುಗಡೆ ಭಾಗ್ಯ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
* ಜೊತೆಗೆ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 46 ಜೀವಾವಧಿ ಶಿಕ್ಷಾ ಬಂಧಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ.

Share This Article