ಮೂರನೇ ಹಂತದ ಮೆಟ್ರೋ ಯೋಜನೆ ಕೈಗೆತ್ತಿಕೊಳ್ಳಲು ಸಂಪುಟ ತೀರ್ಮಾನ

Public TV
1 Min Read

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಮೂರನೇ ಹಂತದ ಮೆಟ್ರೋ (Metro) ಕಾಮಗಾರಿ ಕೈಗೆತ್ತಿಕೊಳ್ಳಲು ಇಂದಿನ ಸಚಿವ ಸಂಪುಟ (Cabinet of Ministers) ಒಪ್ಪಿಗೆ ನೀಡಿದೆ.

ಒಟ್ಟು 15,611 ಕೋಟಿ ವೆಚ್ಚದಲ್ಲಿ ಮೂರನೇ ಹಂತದ ಮೆಟ್ರೋ ಕಾಮಗಾರಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. 2028 ರೊಳಗೆ ಮೂರನೆ ಹಂತದ ಕಾಮಗಾರಿ ಮುಗಿಸುವ ಲೆಕ್ಕಾಚಾರದಲ್ಲಿ ಸಂಪುಟ ಒಪ್ಪಿಗೆ ನೀಡಿದೆ. 80-85% ರಾಜ್ಯ ಸರ್ಕಾರ ಹಾಗೂ 15% ಅಂದಾಜು ಕೇಂದ್ರ ಸರ್ಕಾರ ವೆಚ್ಚ ಭರಿಸಲಿದೆ. ಒಟ್ಟು 44.65 ಕಿ.ಮೀನ ಮೂರನೇ ಹಂತದ ಮೆಟ್ರೋ ಕಾಮಗಾರಿ ಇದಾಗಿದೆ. ಇದನ್ನೂ ಓದಿ: ರಾಜಕೀಯಕ್ಕೆ ಬಂದಾಗ ಜಾಸ್ತಿ ಟೀಕೆ ಎದುರಿಸಬೇಕು: ಯದುವೀರ್ ಒಡೆಯರ್

ಹೆಬ್ಬಾಳದಿಂದ (Hebbala) ಶುರುವಾಗಿ ತುಮಕೂರು ರಸ್ತೆ ರಾಜ್‌ಕುಮಾರ್ ಸಮಾಧಿ ಆಸುಪಾಸು ಹಾಗೂ ಅಲ್ಲಿಂದ ಮೈಸೂರು ರಸ್ತೆ, ಕನಕಪುರ ರಸ್ತೆ, ಮಾಗಡಿ ರಸ್ತೆ ಮೂಲಕ ಜೆಪಿ ನಗರ (JP Nagar) ತಲುಪುವ ಮೆಟ್ರೋ ಕಾಮಗಾರಿ ಇದಾಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಚುನಾವಣಾ ಬಾಂಡ್‌ ವಿವರವನ್ನು ಬಹಿರಂಗಪಡಿಸಿದ ಚುನಾವಣಾ ಆಯೋಗ

Share This Article