ಆಳಂದ ಫೈಲ್ಸ್ ಕೇಸ್ ತನಿಖೆಗೆ ಎಸ್‌ಐಟಿ ರಚನೆಗೆ ಕ್ಯಾಬಿನೆಟ್ ಒಲವು

Public TV
1 Min Read

ಬೆಂಗಳೂರು: ಆಳಂದ ಫೈಲ್ಸ್ ಕೇಸ್ (Alanda Files Case) ತನಿಖೆಗೆ ಎಸ್ಐಟಿ (SIT) ರಚನೆಗೆ ಕ್ಯಾಬಿನೆಟ್ ಒಲವು ತೋರಿದೆ. ಸಿಐಡಿ ಮುಖ್ಯಸ್ಥ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ ಸಾಧ್ಯತೆ ಇದೆ. ಆಳಂದ ಫೈಲ್ಸ್ ಬಗ್ಗೆ ಕ್ಯಾಬಿನೆಟ್ ನಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಎಸ್‌ಐಟಿ ರಚನೆ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಪತ್ರ ವಿಚಾರವಾಗಿ ಸುಗ್ರೀವಾಜ್ಞೆ ಬೇಡ ಎಂದು ಕ್ಯಾಬಿನೆಟ್ ತೀರ್ಮಾನ ಮಾಡಿದೆ. ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡೋಣ, ಈಗಿರುವ ಕಾನೂನಿನಲ್ಲೇ ಅವಕಾಶ ಇದೆ ಎಂದು ಕ್ಯಾಬಿನೆಟ್ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಲಿಂಗಾಯತರನ್ನು ತುಂಡು ತುಂಡು ಮಾಡಲು ಹೇಳಿದ್ಯಾರು- ಪೇಪರ್‌ ಎಸೆದು ಕ್ಯಾಬಿನೆಟ್‌ ಸಭೆಯಲ್ಲಿ ಎಂಬಿಪಿ ರೋಷಾವೇಶ

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, ಮತಪತ್ರ ಕಡ್ಡಾಯದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವ ಅವಶ್ಯಕತೆ ಇದೆಯೋ ಇಲ್ಲವೋ ಎಂಬ ಬಗ್ಗೆ ಚರ್ಚೆ ನಡೆದಿದೆ. ಚುನಾವಣಾ ಆಯೋಗದ ಆಯುಕ್ತರ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿಯವರು ಗಂಭೀರವಾದ ಆರೋಪ ಮಾಡಿದ್ದಾರೆ. ಅದರ ಸಂಬಂಧ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಚುನಾವಣಾ ಆಯೋಗ ಅಫಿಡವಿಟ್ ನೀಡಲು ಹೇಳುವುದು ಸರಿಯಲ್ಲ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕ್ಯಾಬಿನೆಟ್‌ ಸಭೆಯಲ್ಲಿ ಜಾತಿ ಜಟಾಪಟಿ – ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ

Share This Article