ತೆರಿಗೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ರೆ ಕೂಡಲೇ ಕರೆ ಮಾಡಿ – ಸಹಾಯವಾಣಿ ಬಿಡುಗಡೆ

Public TV
1 Min Read

ಬೆಂಗಳೂರು: ವಾಣಿಜ್ಯ ತೆರಿಗೆ (Commercial Tax) ಅಧಿಕಾರಿ-ಸಿಬ್ಬಂದಿ/ಬ್ರೋಕರ್‌ಗಳು ಯುಪಿಐಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ (Bribe) ಬೇಡಿಕೆ ಇಟ್ಟಲ್ಲಿ ತಕ್ಷಣ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ವಾಣಿಜ್ಯ ತೆರಿಗೆ ಇಲಾಖೆ ಸಹಾಯವಾಣಿ ಬಿಡುಗಡೆ ಮಾಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮಾಡಿದ ವಾಣಿಜ್ಯ ತೆರಿಗೆ ಇಲಾಖೆ, ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಇಲಾಖೆಯು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿ/ಸಿಬ್ಬಂದಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳವುದಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಬದ್ಧವಾಗಿರುತ್ತದೆ ಎಂದಿದೆ. ಇದನ್ನೂ ಓದಿ: ಐಸಿಸ್‌ ಮಾದರಿಯಲ್ಲಿ ಧಾರ್ಮಿಕ ಮತಾಂತರ ದಂಧೆ – 6 ರಾಜ್ಯಗಳಲ್ಲಿ 10 ಮಂದಿ ಅರೆಸ್ಟ್‌, ಬೃಹತ್‌ ಜಾಲ ಭೇದಿಸಿದ UP ಪೊಲೀಸ್‌

ವ್ಯಾಪಾರಸ್ಥರು ಇಂತಹ ಪ್ರಕರಣಗಳನ್ನು ತಕ್ಷಣ ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ತರಲು ಸಹಾಯವಾಣಿ ಸಂಖ್ಯೆ- 1800 425 6300 (ಸಮಯ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ರಜಾದಿನಗಳನ್ನು ಹೊರತುಪಡಿಸಿ) ಸಂಪರ್ಕಿಸುವಂತೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಕೇಂದ್ರ ಕಚೇರಿ-1ರ ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಯುಜಿನೀಟ್: ಆಪ್ಷನ್ ಎಂಟ್ರಿ ಆರಂಭ, ಜು.22 ಕೊನೆ ದಿನ – ಕೆಇಎ

Share This Article