ಎನ್‌ಡಿಎಗೆ ಶಾಕ್‌ – ಮೈತ್ರಿ ತೊರೆದ ಜನಸೇನಾ ಪಕ್ಷ

Public TV
1 Min Read

ಹೈದರಾಬಾದ್‌: ಕೇವಲ ಒಂದು ವಾರದ ಅಂತರದಲ್ಲಿ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಎರಡನೇ ಶಾಕ್ ತಗುಲಿದೆ. ವಾರದ ಹಿಂದೆ ಎನ್‌ಡಿಎ ಮೈತ್ರಿಕೂಟವನ್ನು ತಮಿಳುನಾಡಿನ ಅಣ್ಣಾಡಿಎಂಕೆ (AIDMK) ಪಕ್ಷ ತೊರೆದಿತ್ತು. ಇದೀಗ ಆಂಧ್ರಪ್ರದೇಶದಲ್ಲಿ ಜನಸೇನಾ ಪಕ್ಷ (JanaSena Party) ಕೂಡ ಬಿಜೆಪಿಗೆ (BJP) ಶಾಕ್ ನೀಡಿದೆ.

ಬದಲಾದ ಕಾಲಘಟ್ಟದಲ್ಲಿ ಜಗನ್ ಸರ್ಕಾರದ ವಿರುದ್ಧ ಸಿಡಿದಿರುವ ನಟ ಪವನ್ ಕಲ್ಯಾಣ್ (Pawan Kalyan) ತೆಲುಗುದೇಶಂ ಜೊತೆಗೂಡಿ ಚುನಾವಣೆ ಎದುರಿಸಲು ತೀರ್ಮಾನಿಸಿದ್ದಾರೆ.  ಇದನ್ನೂ ಓದಿ: ಹೊಸ ಮದ್ಯ ನೀತಿ ಪ್ರಕರಣದ ಕಿಂಗ್‌ಪಿನ್ ಸರದಿಯೂ ಬರಲಿದೆ; ದೆಹಲಿ ಸಿಎಂಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಅನುರಾಗ್ ಠಾಕೂರ್

ಕಷ್ಟಕಾಲದಲ್ಲಿ ಬಂಧಿತ ಚಂದ್ರಬಾಬು ನಾಯ್ಡ (Chandrababu Naidu) ಜೊತೆ ಇರಲು ಎನ್‌ಡಿಎ ಮೈತ್ರಿಕೂಟ ತೊರೆದಿದ್ದೇನೆ ಎಂದು ಅಧಿಕೃತವಾಗಿ ಪವನ್ ಕಲ್ಯಾಣ್ ಪ್ರಕಟಿಸಿದ್ದಾರೆ. ಟಿಡಿಪಿ-ಜನಸೇನೆ ಮೈತ್ರಿಯಿಂದ ವೈಎಸ್‌ಆರ್ ಕಾಂಗ್ರೆಸ್ (YSR Congress) ಸೋಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ತೆಲಂಗಾಣ ಚುನಾವಣೆ ಬಳಿಕ ತೆಲುಗುದೇಶಂ-ಜನಸೇನಾ ಪಕ್ಷಗಳು ಕಾಂಗ್ರೆಸ್ ಜೊತೆಗೂಡಬಹುದು ಎಂಬ ಸುದ್ದಿಯೂ ಹಬ್ಬಿದೆ.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್