ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ ಬೊಮ್ಮಾಯಿ ಸರ್ಕಾರದ ಹಗರಣ – ಶಿಕ್ಷಣ ಸಚಿವರು ರಾಜೀನಾಮೆಗೆ ಕ್ಯಾಂಪಸ್ ಫ್ರಂಟ್ ಪಟ್ಟು

By
1 Min Read

ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿತರಿಸುವ ಸಮವಸ್ತ್ರದಲ್ಲಿ ಬಹು ಕೋಟಿಯ ಹಗರಣ ಬೆಳಕಿಗೆ ಬಂದಿದ್ದು, ಇದು ಶಿಕ್ಷಣ ಸಚಿವರ ಕಮಿಷನ್ ದಂಧೆಯಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ಆಗ್ರಹಿಸಿದೆ.

ನಿರಂತರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ರಾಜೀನಾಮೆ ನೀಡಬೇಕೆಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿಯು ಒತ್ತಾಯಿಸುತ್ತಿದೆ. ಇದನ್ನೂ ಓದಿ: ಲಂಚವನ್ನು ಪಡೆದಿಲ್ಲ ಎಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ: ಈಶ್ವರಪ್ಪಗೆ ಹಿಂದೂ ಮಹಾಸಭಾ ಸವಾಲು

high court (1)

ಆರ್‌ಟಿಇ ಕಾಯ್ದೆಯಡಿ ಬರುವ ವಿದ್ಯಾರ್ಥಿಗಳಿಗೆ 2019ರ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಲ್ಲಿ ಸರ್ಕಾರವು ಹೊಲಿದ ಸಮವಸ್ತ್ರ ನೀಡಬೇಕೆಂದು ಹೇಳಿದೆ. ಈ ಹಿಂದೆ ಖಾಸಗಿ ಸಂಸ್ಥೆಗಳ ಮೂಲಕ ಸರ್ಕಾರ ನೀಡಿದ್ದ ಟೆಂಡರ್ ಪ್ರಕಾರ ಕೇವಲ 230 ರೂ.ಗೆ ಹೊಲಿದ ಎರಡು ಜೊತೆ ಸಮವಸ್ತ್ರ ಜೊತೆಗೆ ಶೂ, ಸಾಕ್ಸ್‌ ಹಾಗೂ ಟೈ ಕೂಡ ಎಸ್‍ಡಿಎಂಸಿ ಮುಖಾಂತರ ವಿತರಣೆ ಮಾಡಲಾಗಿತ್ತು. ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಉದ್ಯೋಗವಾಗುತ್ತಿದ್ದು ಆದರೆ ಇದೀಗ ಸರ್ಕಾರವು ಎಸ್‍ಡಿಎಂಸಿಯನ್ನು ಕಡೆಗಣಿಸಿ, ಕೇವಲ ಕಮಿಷನ್ ವ್ಯಾವೋಹದಿಂದ ಮಹಾರಾಷ್ಟ್ರ ಮೂಲದ ಕಂಪನಿಗೆ ಟೆಂಡರ್ ನೀಡಿ 250 ರೂ. ಗಳಂತೆ ಹೊಲಿಯದ ಬಟ್ಟೆಯನ್ನು ನೀಡಲು ಮುಂದಾಗಿದೆ. ಈ ಮುಖಾಂತರ ಬಹು ಕೋಟಿಯ ಹಗರಣ ನಡೆದಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ ಸೋಲಿನ ಬಳಿಕ ಎಚ್ಚೆತ್ತ ಕಾಂಗ್ರೆಸ್ – ಗುಜರಾತ್ ಎಲೆಕ್ಷನ್ ಮೇಲೆ ಕಣ್ಣು

ಶಿಕ್ಷಣ ಸಚಿವರು ಈ ಹಗರಣದ ಹಿಂದೆ ಕಮಿಷನ್ ದಂಧೆ ನಡೆಸುತ್ತಿದ್ದು ಉಚ್ಛ ನ್ಯಾಯಾಲಯದ ತೀರ್ಪನ್ನು ಕೂಡ ಪರಿಗಣಿಸದೆ ನ್ಯಾಯಾಲಯದ ನಿಂದನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ ಕಮಿಷನ್ ದಂಧೆ ನಡೆಸಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರು ಶೀಘ್ರ ರಾಜೀನಾಮೆ ನೀಡಬೇಕೆಂದು ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *