ಲಸಿಕೆ ಕಡ್ಡಾಯ ನಿಯಮ ವಿರೋಧಿಸಿ ತೀವ್ರ ಪ್ರತಿಭಟನೆ – ರಹಸ್ಯ ಸ್ಥಳಕ್ಕೆ ಕೆನಡಾ ಪಿಎಂ ಸ್ಥಳಾಂತರ

Public TV
1 Min Read

ಒಟ್ಟಾವಾ: ಕೋವಿಡ್‌-19 ಲಸಿಕೆಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಮತ್ತು ಅವರ ಕುಟುಂಬ ರಾಜಧಾನಿಯಲ್ಲಿನ ತಮ್ಮ ಮನೆ ತೊರೆದು ರಹಸ್ಯ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ.

ಗಡಿಯಂಚಿನ ಟ್ರಕ್‌ ಚಾಲಕರಿಗೆ ಕೋವಿಡ್‌ ಲಸಿಕೆ ಕಡ್ಡಾಯ ಎಂಬ ನಿಯಮವನ್ನು ಕೆನಡಾ ಸರ್ಕಾರ ಹೊರಡಿಸಿದ್ದು, ಇದರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಕಡ್ಡಾಯ ನಿಯಮವನ್ನು ಹಿಂತೆಗೆದುಕೊಳ್ಳಬೇಕು ಎಂದು ರಾಜಧಾನಿಯಲ್ಲಿ ಅಪಾರ ಸಂಖ್ಯೆಯಲ್ಲಿ ಟ್ರಕ್‌ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಟ್ರಕ್‌ಗಳನ್ನು ಪ್ರತಿಭಟನಾ ಸ್ಥಳದಲ್ಲಿ ನಿಲ್ಲಿಸಿದ್ದಾರೆ. ಇದನ್ನೂ ಓದಿ: ಆಹಾರಕ್ಕಾಗಿ ಅಪ್ಘಾನ್‌ ಜನರಿಂದ ಮಕ್ಕಳು, ದೇಹದ ಅಂಗಾಂಗಗಳ ಮಾರಾಟ

ಕೋವಿಡ್‌ ಲಸಿಕೆ ಆದೇಶ ಮತ್ತು ಇತರ ಸಾರ್ವಜನಿಕ ಆರೋಗ್ಯ ನಿರ್ಬಂಧಗಳನ್ನು ತೆಗೆದುಹಾಕಲು ಕ್ರಮವಹಿಸುವಂತೆ ಶನಿವಾರ ರಾಜಧಾನಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟ್ರಕ್‌ ಚಾಲಕರು, ಇತರೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಮಕ್ಕಳು, ವೃದ್ಧರು, ಅಂಗವಿಕಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕೆಲವರು ಪ್ರತಿಭಟನಾಕಾರರು ಪ್ರಮುಖ ಯುದ್ಧ ಸ್ಮಾರಕದ ಮೇಲೆ ನೃತ್ಯ ಮಾಡಿರುವ ದೃಶ್ಯ ಸೆರೆಯಾಗಿದೆ.

ತೀವ್ರ ಶೀತದ ಎಚ್ಚರಿಕೆಯ ಹೊರತಾಗಿಯೂ ನೂರಾರು ಪ್ರತಿಭಟನಾಕಾರರು ಸಂಸತ್ತಿನ ಆಚರಣಕ್ಕೆ ನುಗ್ಗಿದ್ದಾರೆ. ಹೆಚ್ಚಿನ ಅನಾಹುತ ತಪ್ಪಿಸಲು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. ಪ್ರತಿಭಟನೆ ತೀವ್ರತೆ ಅರಿತ ಕೆನಡಾ ಪ್ರಧಾನಿ ಅವರನ್ನು ರಹಸ್ಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಪತ್ನಿಯ ಹುಟ್ಟುಹಬ್ಬಕ್ಕೆ ಬುರ್ಜ್ ಖಲಿಫಾದಲ್ಲಿ ಫೋಟೋ ಹಾಕಿ ಶುಭ ಕೋರಿದ ರೊನಾಲ್ಡೊ

Share This Article
Leave a Comment

Leave a Reply

Your email address will not be published. Required fields are marked *