ಕೈಗೆ ಬ್ಯಾಂಡೇಜ್ ಸುತ್ತಿಕೊಂಡೇ ಕಾನ್ಸ್ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ ಐಶ್ವರ್ಯಾ ರೈ

Public TV
1 Min Read

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ಸ್ ಫಿಲ್ಮ್ ಫೆಸ್ಟಿವಲ್ (Cannes Film Festival) ಕೂಡ ಒಂದು. ಕಾನ್ಸ್ ಚಿತ್ರೋತ್ಸವ 14ರಿಂದ ಆರಂಭವಾಗಿದೆ. ಇದೀಗ ಕೈಗೆ ಬ್ಯಾಂಡೇಜ್ ಸುತ್ತಿಕೊಂಡೇ ಕಾನ್ಸ್ ರೆಡ್ ಕಾರ್ಪೆಟ್ ಮೇಲೆ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ (Aishwarya Rai) ಹೆಜ್ಜೆ ಹಾಕಿದ್ದಾರೆ.

ಪ್ರತಿವರ್ಷದಂತೆ ಈ ವರ್ಷವು ಕೂಡ ಕಾನ್ಸ್ ಚಿತ್ರೋತ್ಸವದಲ್ಲಿ ಕರಾವಳಿ ನಟಿ ಐಶ್ವರ್ಯಾ ರೈ ಭಾಗಿಯಾಗಿದ್ದಾರೆ. ಕೈಗೆ ಬ್ಯಾಂಡೇಜ್ ಸುತ್ತಿಕೊಂಡೇ ಕಾನ್ಸ್ ರೆಡ್ ಕಾರ್ಪೆಟ್ ಮೇಲೆ ನಟಿ ಹೆಜ್ಜೆ ಹಾಕಿದ್ದಾರೆ. ನಟಿಯ ಕೈಗೆ ಪೆಟ್ಟಾಗಿದ್ರೂ ನಗು ಮುಖದಿಂದ ನಟಿ ಕಾರ್ಯಕ್ರಮದಲ್ಲಿ ಮಿಂಚಿರೋದು ನೋಡಿ ನೆಟ್ಟಿಗರು ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ:ಕೇಂದ್ರದ ಸಾಧನೆ ಹಾಡಿಹೊಗಳಿದ ರಶ್ಮಿಕಾ ಮಂದಣ್ಣಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಕಾನ್ಸ್ ರೆಡ್ ಕಾರ್ಪೆಟ್‌ನಲ್ಲಿ ನಟಿ ಫಲ್ಗುಣಿ ಶೇನ್ ಪೀಕಾಕ್ ಗೌನ್‌ನಲ್ಲಿ ಮಿಂಚಿದ್ದಾರೆ. ಐಶ್ವರ್ಯಾ ರೈ ವಿವಿಧ ಭಂಗಿಯಲ್ಲಿ ನಿಂತು ಪೋಸ್ ಕೊಡ್ತಿರೋದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. 50ನೇ ವರ್ಷದ ವಯಸ್ಸಿನಲ್ಲಿಯೂ ನಟಿ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ.

ಅಂದಹಾಗೆ, ಕಾನ್ಸ್ ಚಿತ್ರೋತ್ಸವಕ್ಕೆ ಬರಲು ಮುಂಬೈ ವಿಮಾನ ನಿಲ್ದಾಣದಿಂದ ಐಶ್ವರ್ಯಾ ರೈ ಹೊರಟಾಗಲೇ ಫ್ಯಾನ್ಸ್‌ಗೆ ಆತಂಕವಾಗಿತ್ತು. ಆದರೆ ಕೈಗೆ ಪೆಟ್ಟಾಗಿದ್ರೂ ನಗುಮುಖದಿಂದಲೇ ಹೊರಟ ಐಶ್ವರ್ಯಾರನ್ನು ನೋಡಿ ಅಭಿಮಾನಿಗಳು ಆರೋಗ್ಯ ವಿಚಾರಿಸಿದ್ದರು.

Share This Article