ಚಾಲಕನ ನಿಯಂತ್ರಣ ತಪ್ಪಿ ಫ್ಲೈ ಓವರ್‌ನಲ್ಲೇ ಕಾರು ಪಲ್ಟಿ; ಓರ್ವ ಸ್ಥಳದಲ್ಲೇ ಸಾವು

Public TV
1 Min Read

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಫ್ಲೈ ಓವರ್‌ನಲ್ಲೇ ಕಾರು ಪಲ್ಟಿಯಾಗಿ (Car Sccident) ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಸಮೀಪ ನಡೆದಿದೆ.

ಬೆಂಗಳೂರು ಮೂಲದ ಧೀರಜ್ (18) ಮೃತ ದುರ್ದೈವಿ. ಕಾರಿನಲ್ಲಿದ್ದ ಜಗದೀಶ್, ನಳಿನಾಕ್ಷಿ, ದುಷ್ಯಂತ್‌ ಗಂಭೀರವಾಗಿ ಗಾಯಗೊಂಡಿದ್ದು, ಮೂವರನ್ನು ಬೆಂಗಳೂರಿನ ಆಸ್ಪತ್ರೆಗೆ (Bengaluru Hospital) ರವಾನಿಸಲಾಗಿದೆ. ಇದನ್ನೂ ಓದಿ: ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

ಬೆಂಗಳೂರಿನಿಂದ ಹಾಸನದ ಕಡೆಗೆ ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದ ವೇಳೆ ಅತಿ ವೇಗವಾಗಿ ಕಾರು ಚಾಲನೆ ಮಾಡುತ್ತಿದ್ದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ನಾಲ್ಕೈದು ಬಾರಿ ಕಾರು ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆದ್ರೆ ಕೂದಲೆಳೆ ಅಂತರದಲ್ಲಿ ಕಾರು ಫ್ಲೈಓವರ್‌ನಿಂದ ಕೆಳಗೆ ಬೀಳುವುದು ತಪ್ಪಿದೆ. ಇದನ್ನೂ ಓದಿ: ರಾಷ್ಟ್ರಪತಿ ವಿಚಾರದಲ್ಲಿ ಕಾಂಗ್ರೆಸ್‌ನಿಂದ ಚಿಲ್ಲರೆ ರಾಜಕಾರಣ – ಪ್ರಹ್ಲಾದ್‌ ಜೋಶಿ ಕಿಡಿ

ಗಾಯಗೊಂಡವರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಮತ್ತಷ್ಟು ನೀರು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್