ಕಾರು ಅಪಘಾತ: ನಟ ನಾಗಭೂಷಣ್ ಹೇಳೋದೇನು?

Public TV
2 Min Read

ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ (Car accident) ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ನಾಗಭೂಷಣ್ (Nagbhushan) ಈ ಅಪಘಾತಕ್ಕೆ ಕಾರಣವಾಗಿದ್ದು, ಸದ್ಯ ನಟನನ್ನು ಕುಮಾರಸ್ವಾಮಿ ಪೋಲಿಸರು ಬಂಧಿಸಿದ್ದಾರೆ. ಈ ಘಟನೆಯ ಕುರಿತು ಸ್ವತ ನಾಗಭೂಷಣ್ ಕೂಡ ಪೊಲೀಸರ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ.

ನಿನ್ನ ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್.ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ನಾಗಭೂಷಣ್ ತಿಳಿಸಿದ್ದಾರೆ. ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಮಹಿಳೆ ಮತ್ತು ಒಬ್ಬರು ವ್ಯಕ್ತಿ ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು ಎಂದು ಅವರು ಹೇಳಿಕೆಯನ್ನು ನೀಡಿದ್ದಾರೆ. ಇದನ್ನೂ ಓದಿ:ದೊಡ್ಮನೆ ಆಟಕ್ಕೆ ಜೊತೆಯಾಗ್ತಾರಾ ಮೇಘಾ ಶೆಟ್ಟಿ? ಕೊನೆಗೂ ಸಿಕ್ತು ಉತ್ತರ

ಈ ಘಟನೆಯಾದಾಗ ಮಹಿಳೆಗೆ ತಲೆಗೆ ಮತ್ತು ಮುಖಕ್ಕೆ ಜಾಸ್ತಿ ಏಟಾಗಿತ್ತು. ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಗಂಡಸಿಗೆ ಕಾಲುಗಳಿಗೆ ಮತ್ತು ಹೊಟ್ಟೆ ಹಾಗೂ ತಲೆಗೆ ಗಾಯವಾಗಿತ್ತು. ನನ್ನ ಕಾರು ಸ್ಟಾರ್ಟ್ ಆಗದೇ ಇರುವ ಕಾರಣಕ್ಕಾಗಿ ಆಟೋದಲ್ಲಿ ಅವರನ್ನು ಸ್ವತಃ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆಸ್ಪತ್ರೆಯ ವೈದ್ಯರು ಮಾರ್ಗಮಧ್ಯದಲ್ಲೇ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.  ಘಟನೆಯನ್ನು ತಿಳಿದು ಸಂಚಾರಿ ಪೊಲೀಸರು ಆಸ್ಪತ್ರೆಗೆ ಬಂದರು. ನಾನು ಕೂಡ ಅವರೊಂದಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ ಎಂದು ತಮ್ಮ ಹೇಳಿಕೆಯನ್ನು ನಾಗಭೂಷಣ್ ದಾಖಲಿಸಿದ್ದಾರೆ.

 

ಕಾರು ಅಪಘಾತದಲ್ಲಿ ಮಹಿಳೆಯೊಬ್ಬರ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ (Arrest). ಕೆಲವೇ ಗಂಟೆಗಳಲ್ಲಿ ಅವರನ್ನು ಕೋರಮಂಗಲದಲ್ಲಿರುವ ಜಡ್ಜ್ ಮುಂದೆ ಹಾಜರುಪಡಿಸುವುದಾಗಿ ತಿಳಿದು ಬಂದಿದೆ. ನಾಗಭೂಷಣ್ ಅವರು  ಕೂಡ ಸ್ವತಃ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್