ಮಡಿಕೇರಿ: ಕಾರು ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಗ್ಗೋಡ್ಲು ಗ್ರಾಮದ ಮಡಿಕೇರಿ ಮತ್ತು ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕೇವಿನ್ (32) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಚರಣ್ (28) ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.
ಇಂದು ಬೆಳಿಗ್ಗೆ ಕೇವಿನ್ ಮತ್ತು ಚರಣ್ ಇಬ್ಬರು ಮೂರ್ನಾಡ್ ಮಾರ್ಗವಾಗಿ ಮಡಿಕೇರಿ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಸ್ಕೂಟಿ ಸವಾರರು ಅತೀ ವೇಗದಲ್ಲಿ ಚಲಿಸುತ್ತಿದ್ದು, ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ಸಿಗದೇ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಚಲಾಯಿಸುತ್ತಿದ್ದ ಕೇವಿನ್ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.
ಘಟನೆ ನಡೆದ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೋಲಿಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸಿದ್ದಾರೆ.