ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಮೂವರಿಗೆ ಗಾಯ

1 Min Read

ಚಿತ್ರದುರ್ಗ: ಓವರ್ ಟೇಕ್ (Over Take) ಮಾಡುವ ಅವಸರದಲ್ಲಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗದ (Chitradurga) ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ನಡೆದಿದೆ.

ಇನ್ನೋವಾ ಕಾರು ಮಹಾರಾಷ್ಟ್ರದಿಂದ ಬೆಂಗಳೂರು ಕಡೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ನಗರದಲ್ಲಿ ಸಿಎನ್‌ಜಿ ಗ್ಯಾಸ್ ಸಮಸ್ಯೆ – ಬಂಕ್‌ಗಳ ಮುಂದೆ ಕಿ.ಮೀ ಉದ್ದ ಕ್ಯೂ

ಮೃತರನ್ನು ಕಮಲ್ ಹರಿಬಾಬು, ರಾಕೇಶ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಮಂಡ್ಯ | ಅಂತರ ಜಿಲ್ಲಾ‌ ಖದೀಮರ ಬಂಧನ – 31 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

Share This Article