ಚಾಲಕನ ನಿಯಂತ್ರಣ ತಪ್ಪಿ ಕೆರೆಗುರುಳಿದ ಕಾರು – ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿದ ಮೂವರ ಜೀವ

1 Min Read

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ರಿಪ್ಪನ್‍ಪೇಟೆಯ (Ripponpet) ತಾವರೆಕೆರೆಗೆ ಕಾರೊಂದು ಉರುಳಿ (Car Accident) ಬಿದ್ದಿದೆ. ಅಪಘಾತ ಆದ ತಕ್ಷಣ ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾರುತಿ ಆಲ್ಟೋ ಕಾರಿನಲ್ಲಿ ಮೂವರು ಹಾಸನದಿಂದ (Hassan) ಕೊಲ್ಲೂರಿಗೆ (Kolluru) ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ತಾವರೆಕೆರೆಗೆ ಕಾರು ಉರುಳಿದೆ. ಕಾರು ಕೆರೆಗೆ ಉರುಳುತ್ತಿದ್ದಂತೆ ತಕ್ಷಣ ಸ್ಥಳಿಯರು ಕಾರನ್ನು ಬದಿಗೆ ತಂದು, ಮೂರನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ. ಇದನ್ನೂ ಓದಿ: ಅಗ್ನಿ ದುರಂತದಲ್ಲಿ 25 ಮಂದಿ ಬಲಿ – ಗೋವಾ ನೈಟ್‌ಕ್ಲಬ್‌ ಮ್ಯಾನೇಜರ್‌ ಅರೆಸ್ಟ್‌, ಮಾಲೀಕನ ವಿರುದ್ಧ ವಾರಂಟ್‌

ರಿಪ್ಪನ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಫೈನಾನ್ಸ್‌ನ 3 ಲಕ್ಷಕ್ಕೂ ಅಧಿಕ ಹಣ ಆನ್‌ಲೈನ್ ಗೇಮ್‌ಗೆ ಬಳಕೆ – ದುಡ್ಡು ವಾಪಸ್ ಕಟ್ಟಲಾಗದೇ ಯುವಕ ಆತ್ಮಹತ್ಯೆ

Share This Article