ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

Public TV
1 Min Read

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (Car) ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpura) ತಾಲೂಕಿನ ಶಿರಾಡಿಘಾಟ್ (Shiradi Ghat) ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಬಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಬಾರಿ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ: ಹಿರಿಯ ನಟಿ ಬಿ. ಸರೋಜಾದೇವಿ ನಿಧನ – ಡಿಕೆಶಿ ಸಂತಾಪ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಆಲ್ಕರಜ್‌ ಹ್ಯಾಟ್ರಿಕ್‌ ಕನಸು ಭಗ್ನ- ಚೊಚ್ಚಲ ವಿಂಬಲ್ಡನ್‌ ಗೆದ್ದ ಸಿನ್ನರ್‌ | ನಗದು ಬಹುಮಾನ ಎಷ್ಟು?

Share This Article