ರಸ್ತೆ ಬದಿ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಕಾರು – ಮೂವರು ದುರ್ಮರಣ

By
1 Min Read

ಮಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಕಾರ್ಮಿಕರಿಗೆ ಅತಿ ವೇಗದಿಂದ ಬಂದ ಕಾರೊಂದು (Car) ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯದ ಅಡ್ಕಾರು ಎಂಬಲ್ಲಿ ನಡೆದಿದೆ.

ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರನ್ನು ಚಾಲಕ ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ ಹಾಗೂ ಮಾಂತೇಶ್ ಅವರಿಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ದರೋಡೆಕೋರರ ಕಾಟ ಆಯ್ತು; ಈಗ ಬೆಂ-ಮೈ ಎಕ್ಸ್‌ಪ್ರೆಸ್‌ವೇಯಲ್ಲಿ ಡೀಸೆಲ್ ಕಳ್ಳರ ಹಾವಳಿ

ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆದಿದ್ದು ಲಾರಿಯೂ ಜಖಂಗೊಂಡಿದೆ. ಘಟನೆಯ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಾರ್ಗ ಮಧ್ಯೆ ಕೈಕೊಟ್ಟ ಅಂಬುಲೆನ್ಸ್ – ಆನೆ ದಾಳಿಯಿಂದ ಗಾಯಗೊಂಡಿದ್ದ ಶಾರ್ಪ್ ಶೂಟರ್ ಅರಣ್ಯ ಸಿಬ್ಬಂದಿ ಸಾವು

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್