ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಚಾಲಕ ಗಂಭೀರ

Public TV
1 Min Read

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ (Expressway) ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು (Car) ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಡ್ಯದ (Mandya) ಕೋಣನಹಳ್ಳಿ (Konanahalli) ಬಳಿ ನಡೆದಿದೆ.

ಘಟನೆಯಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ಚಾಲಕ ಮಾತ್ರ ತೆರಳುತ್ತಿದ್ದ. ವೇಗವಾಗಿ ಬರುತ್ತಿದ್ದ ಹಿನ್ನೆಲೆ ಎಕ್ಸ್‌ಪ್ರೆಸ್ ವೇಯ ಎಡ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರು ಜಖಂಗೊಂಡಿದೆ. ಇದನ್ನೂ ಓದಿ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

ಕಾರಿನಲ್ಲಿದ್ದ ಚಾಲಕನ ತಲೆ ಹಾಗೂ ಕೈಗೆ ಗಂಭೀರ ಪೆಟ್ಟು ಬಿದ್ದಿದ್ದು, ರಕ್ತದ ಮಡುವಿನಲ್ಲಿ ಚಾಲಕ ನರಳಾಡಿದ್ದಾರೆ. ಬಳಿಕ ಸ್ಥಳೀಯರು ಚಾಲಕನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸೆಂಟ್ರಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್

Share This Article