ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರು (Car) ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ (Accident) ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.
ಭಟ್ಕಳದ (Bhatkal) ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ನುದ್ದೀನ್ ಶಿಪಾಯಿಯವರ ಪುತ್ರ ಬಿಲಾಲ್ (15) ಹಾಗೂ ಆಯಾನ್ (20) ಮೃತ ದುರ್ದೈವಿಗಳು. ಬಿಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾಯಗೊಂಡಿದ್ದ. ಆತನನ್ನು ಉಡುಪಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಕತ್ತು ಹಿಸುಕಿ ಕೊಂದ ಪತಿ – ಪೊಲೀಸರ ಮುಂದೆ ಶರಣಾದ
ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪಘಾತ ನಡೆದಿದೆ. ಅಪಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಸಾವು, ಇಬ್ಬರಿಗೆ ಗಾಯ

