ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ- ಸ್ಥಳದಲ್ಲೇ 3 ಯುವಕರ ದುರ್ಮರಣ

Public TV
1 Min Read

ಕೋಲಾರ: ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಯುವಕರು ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ತಂಬಿಹಳ್ಳಿ ಗೇಟ್ ಬಳಿ ತಡರಾತ್ರಿ ನಡೆದಿದೆ.

ಮಹಿಂದ್ರ ಕಂಪನಿಗೆ ಸೇರಿದ ಕೆಎ04 ಎಬಿ1081 ನಂಬರಿನ ಕಾರು ಅಪಘಾತಕ್ಕೆ ಒಳಗಾಗಿದೆ. ಮುಳಬಾಗಿಲಿನಿಂದ ಕೋಲಾರದ ಕಡೆಗೆ ಮರಳು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಗೆ ವೇಗವಾಗಿ ಬಂದ ಕಾರು ತಂಬಿಹಳ್ಳಿ ಗೇಟ್ ಸಮೀಪದಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಕಾರಿನಲ್ಲಿದ್ದ ಯುವಕರು ಸಾವನ್ನಪ್ಪಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಮೃತರ ವಿಳಾಸ, ಹೆಸರು ಇನ್ನೂ ಪತ್ತೆಯಾಗಿಲ್ಲ.

Share This Article
Leave a Comment

Leave a Reply

Your email address will not be published. Required fields are marked *