ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕು ಕಪ್ಪಳ್ಳಿ ಬಳಿ ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದ್ದು, ರಸ್ತೆ ಪಕ್ಕದ 100 ಅಡಿ ಅಳದ ಪ್ರಪಾತಕ್ಕೆ ಕಾರು ಪಲ್ಟಿಯಾಗಿ ಉರುಳಿಬಿದ್ದರೂ ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ರಘು (50) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಕಲೇಶಪುರದಿಂದ ಮಾರನಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು, ಪ್ರಪಾತಕ್ಕೆ ಉರುಳುವ ಮೊದಲು ಮೂರು ಬಾರಿ ಪಲ್ಟಿಯಾಗಿದೆ. ರಸ್ತೆ ಪಕ್ಕ ತಡೆಗೋಡೆ ಇಲ್ಲದ ಕಾರಣ ಕಾರು ನೇರ ಪ್ರಪಾತಕ್ಕೆ ಉರುಳಿಬಿದ್ದಿದೆ. ಘಟನೆಯಲ್ಲಿ ಚಾಲಕ ರಘು ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದೆ. ಈ ಕುರಿತು ಮಾಹಿತಿ ಪಡೆದ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧವಿಸಿ ಪ್ರಪಾತದಿಂದ ಕಾರನ್ನು ಮೇಲಕ್ಕೆ ಎತ್ತಿದ್ದು, ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv