ಬೆಂಗಳೂರು: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ನಗರದಲ್ಲಿ ವಾಸವಿದ್ದ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ.
ಕೇರಳದ ತ್ರಿಶೂರ್ ಮೂಲದ ಹರಿ ಮತ್ತು ಪ್ರಭು ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಆನೇಕಲ್ ಗಡಿಗೆ ಹೊಂದಿಕೊಂಡಿರುವ ಸುಳಗಿರಿ ಸಮೀಪದ ಚಿನ್ನಾರ ಬಳಿ ಈ ಅಪಘಾತ ನಡೆದಿದೆ. ಒಟ್ಟು ಮೂವರು ರಾತ್ರಿ ಕೇರಳಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಚಲಾಯಿಸುತ್ತಿದ್ದವನು ನಿದ್ದೆ ಮಂಪರಿನಲ್ಲಿದ್ದ ಪರಿಣಾಮ ಸುಳಗಿರಿ ಸಮೀಪದ ಚಿನ್ನಾರ ಬಳಿ ಕಾರು ವೇಗವಾಗಿ ಹೋಗಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಅವನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಸುಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.