ಜಂಗ್ಲಿ ಮೇಲಿದೆ ಸಾಲು ಸಾಲು ಪ್ರಕರಣಗಳು!

Public TV
2 Min Read

ಬೆಂಗಳೂರು: ನಟ ದುನಿಯಾ ವಿಜಿ ಗೂಂಡಾಗಿರಿ ಪ್ರಕರಣ ಇದೇ ಮೊದಲಲ್ಲ. ಸಿ.ಕೆ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವಿಜಯ್ ವಿರುದ್ಧ ಸಾಲು ಸಾಲು ಪ್ರಕರಣಗಳು ದಾಖಲಾಗಿವೆ.

ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ವಿಜಯ್ ಸಹಾಯ ಮಾಡಿದ್ದರು. ಅಲ್ಲದೇ ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ನಾಪತ್ತೆ ಕೂಡ ಆಗಿದ್ದರು. ನಂತರ ವಿಜಯ್ ಗಾಗಿ ಬಲೆ ಬೀಸಿದ್ದ ಪೊಲೀಸರು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಬಂಧಿಸಿದ ನಂತರ ಡಿಸಿಪಿ ಶರಣಪ್ಪ ಅವರು ವಿಜಿಗೆ ವಾರ್ನಿಂಗ್ ಮಾಡಿ ಕಳುಹಿಸಿದ್ದರು. ಅದಕ್ಕೂ ಮೊದಲು ಸಿಕೆ ಅಚ್ಚುಕಟ್ಟು ಠಾಣೆಯಲ್ಲೇ ಮತ್ತೊಂದು ಕೇಸ್ ನಲ್ಲಿ ವಿಜಿ ಅರೆಸ್ಟ್ ಆಗಿದ್ದರು. ವೃದ್ಧ ವ್ಯಕ್ತಿಯೊಬ್ಬರ ಎದೆಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದರು. ಈ ಕುರಿತು ವೃದ್ಧ ವ್ಯಕ್ತಿ ವಿಜಿ ವಿರುದ್ಧ ದೂರು ದಾಖಲಿಸಿದ್ದರು. ಆ ಸಂದರ್ಭದಲ್ಲೂ ಕರಿಚಿರತೆ ಅರೆಸ್ಟ್ ಆಗಿದ್ದು, ತದನಂತರ ಬೇಲ್ ಪಡೆದು ಹೊರ ಬಂದಿದ್ದರು. ಇದನ್ನೂ ಓದಿ: ದುನಿಯಾ ವಿಜಿ ಹಲ್ಲೆ ಪ್ರಕರಣ: ಜಯಮ್ಮನ ಮಗನಿಗೆ ಜೈಲು..?

ಮೇ 31 2018 ರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇರೆಗೆ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವಿಜಿ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಐಪಿಸಿ ಕಲಂ 353 (ಪೊಲೀಸ್ ಆಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು), ಐಪಿಸಿ ಕಲಂ 255 (ಕರ್ತವ್ಯ ನಿರತ ಪೊಲೀಸ್ ಜೊತೆ ವಾಗ್ವಾದಕ್ಕಿಳಿದಿದ್ದು) ಸಂಬಂಧ ವಿಜಯ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಇದನ್ನೂ ಓದಿ:  ನಿವೃತ್ತ ಯೋಧರಿಗೆ ಅವಾಜ್, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಕರಿಚಿರತೆ!


ಜನವರಿ 18 2013 ರಂದು ಪತ್ನಿ ನಾಗರತ್ನ ಅವರಿಗೆ ಜೀವ ಬೆದರಿಕೆ ಹಾಕಿದ್ದರು. ಅಲ್ಲದೇ ವಿಜಿ ಸಂಬಂಧಿ ಶಿವಶಂಕರಗೌಡ ಎಂಬಾತನಿಗೆ ಹಲ್ಲೆಗೆ ಮುಂದಾಗಿದ್ದರು. ಈ ಎರಡೂ ಪ್ರಕರಣಗಳ ಸಂಬಂಧ ವಿಜಿ ವಿರುದ್ಧ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಜನವರಿ 17 2013 ರಲ್ಲಿ ಕೌಟುಂಬಿಕ ನ್ಯಾಯಲಯದಲ್ಲಿ ವಿಚ್ಚೇದನಕ್ಕೆ ಪತ್ನಿ ಅರ್ಜಿ ಸಲ್ಲಿಸಿದ್ದರು.  ಇದನ್ನೂ ಓದಿ: ರಾತ್ರೋರಾತ್ರಿ ನಟ ದುನಿಯಾ ವಿಜಯ್ ಬಂಧನ!

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

https://www.youtube.com/watch?v=9HevyLtzMc0

Share This Article
Leave a Comment

Leave a Reply

Your email address will not be published. Required fields are marked *