ಕರೆಮ್ಮ ನಾಯಕ್ ಪಿ.ಎಗಳ ಮೇಲೆ ಜಾತಿ ನಿಂದನೆ ಕೇಸ್ – ರೊಚ್ಚಿಗೆದ್ದ ಶಾಸಕಿಯಿಂದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

Public TV
2 Min Read

ರಾಯಚೂರು: ದೇವದುರ್ಗ (Devadurga) ಶಾಸಕಿ ಕರೆಮ್ಮ ನಾಯಕ್ (Karemma Nayak) ಪಿ.ಎಗಳ ಮೇಲೆ ಜಾತಿ ನಿಂದನೆ ಕೇಸ್ ದಾಖಲಾದ ಹಿನ್ನೆಲೆ ರೊಚ್ಚಿಗೆದ್ದ ಶಾಸಕಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ (Protest) ನಡೆಸಿದ್ದಾರೆ.

ಪುತ್ರ, ಸಹೋದರ ಹಾಗೂ ಆಪ್ತ ಕಾರ್ಯದರ್ಶಿ ಪರವಹಿಸಿ ರಾಯಚೂರಿನ (Raichur) ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಪ್ರತಿಭಟನೆ ನಡಸಿದ್ದಾರೆ. ತನಿಖೆ ಮಾಡದೇ ಹೇಗೆ ಅಟ್ರಾಸಿಟಿ ದಾಖಲಿಸಿದ್ದೀರಿ ಎಂದು ಪ್ರತಿಭಟನೆ ನಡೆಸಿದ್ದು, ನಾವೂ ಸಹ ಪ್ರತಿಭಟನೆ ನಡೆಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ದೂರು ತೆಗೆದುಕೊಳ್ಳಲು ದೇವದುರ್ಗ ಪೊಲೀಸರು ನಿರಾಕರಿಸಿದ್ದು, ನ್ಯಾಯ ಬೇಕು ಎಂದು ಶಾಸಕಿ ಪ್ರತಿಭಟನೆಗೆ ಕುಳಿತಿದ್ದಾರೆ. ಇದನ್ನೂ ಓದಿ: ಸುಮಲತಾಗೆ ಟಿಕೆಟ್ ನೀಡಿದ್ರೆ ಮಂಡ್ಯ ಗೆಲುವು ಸುಲಭ – ಅಮಿತ್ ಶಾ ಎದುರು ಬಿಜೆಪಿ ನಾಯಕರ ಬ್ಯಾಟಿಂಗ್

ಅಕ್ರಮ ಮರಳು ಸಾಗಣೆ ಟ್ರಾಕ್ಟರ್ ಜಪ್ತಿ ಮಾಡಿದ್ದಕ್ಕೆ ರಾಯಚೂರಿನ ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಪುತ್ರ , ಆಪ್ತ ಸಹಾಯಕರು ಸೇರಿ ಹಲವರು ಹಲ್ಲೆ ಮಾಡಿದ್ದಾರೆ ಅಂತ ಆರೋಪಿಸಿ ದೇವದುರ್ಗ ಠಾಣೆ ಕಾನ್ಸ್‌ಟೇಬಲ್ ಹನುಮಂತರಾಯ ದೂರು ನೀಡಿದ್ದು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವದುರ್ಗ ಪೇದೆ ಹನುಮಂತ್ರಾಯ ನಾಯಕ್ ಮೇಲೆ ಹಲ್ಲೆ, ಜಾತಿನಿಂದನೆ ಮಾಡಿದ್ದಕ್ಕೆ ಶಾಸಕಿ ಪುತ್ರ ಸಂತೋಷ್, ಸಹೋದರ ತಿಮ್ಮಾರೆಡ್ಡಿ, ಆಪ್ತ ಕಾರ್ಯದರ್ಶಿ ಇಲಿಯಾಸ್, ರಫೀಕ್ ಸೇರಿ 8 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆ ಸುಳ್ಳು ಅಟ್ರಾಸಿಟಿ ಕೇಸ್ ದಾಖಲಿಸಿದ್ದೀರಿ ಎಂದು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದು, ಠಾಣೆ ಮುಂದೆ ನೂರಾರು ಜನ ನೆರೆದಿದ್ದರು. ಇದನ್ನೂ ಓದಿ: 2 ವರ್ಷದ ಹಿಂದೆ ಅರ್ಧ ಕೆಜಿ ಚಿನ್ನ, 50 ಲಕ್ಷ ಕೊಟ್ಟು ಮದ್ವೆ- ಗೃಹಿಣಿ ನೇಣು ಬಿಗಿದು ಆತ್ಮಹತ್ಯೆ

ಸ್ಥಳಕ್ಕೆ ಎಸ್‌ಪಿ ನಿಖಿಲ್ ಬಿ ಭೇಟಿ ನೀಡಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಶಾಸಕಿ ಪ್ರತಿಭಟನೆ ಹಿಂಪಡೆದಿದ್ದಾರೆ. ಮಧ್ಯರಾತ್ರಿಯಿಂದ ಬೆಳಗಿನ ಜಾವದವರೆಗೆ ಠಾಣೆಮುಂದೆ ಪ್ರತಿಭಟನೆ ನಡೆಸಿದ್ದು, ಅಕ್ರಮ ಮರಳುಗಾರಿಕೆಗೆ ಸಾಥ್ ನೀಡುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಿಯರು ಭಾರತದ ಅತಿದೊಡ್ಡ ಆಸ್ತಿ – ಕಾಂಗ್ರೆಸ್‌ ಮಾಜಿ ಸಚಿವ

Share This Article